ಮುಂಬೈ: ನನಗೆ ಹಾಗೂ ನನ್ನ ಕುಟುಂಬಕ್ಕೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರಿನಲ್ಲಿ ಬೆದರಿಕೆಗಳು ಬರುತ್ತಿವೆ ಎಂದು ಮುಂಬೈನ ಎನ್‍ಸಿಬಿ (Narcotics Control Bureau) ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಹೇಳಿದ್ದಾರೆ.
Advertisement
ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರುವ ಅವರು, ನಕಲಿ ಟ್ವಿಟ್ಟರ್ ಖಾತೆಯ ಮೂಲಕ ಬೆದರಿಕೆಗಳು ಬರುತ್ತಿವೆ. ನನಗೆ ಹಾಗೂ ನನ್ನ ಕುಟುಂಬದ ಮೇಲೆ ದಾಳಿಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದೇವರ ದಯೆಯಿಂದ ನಾವು ಕೋರಮಂಡಲ್ ಎಕ್ಸ್‌ಪ್ರೆಸ್ ಹತ್ತಲಿಲ್ಲ – ಬೆಂಗಳೂರಿಗೆ ಬಂದಿಳಿದ ವಾಲಿಬಾಲ್ ಕೋಚ್ ಪ್ರತಿಕ್ರಿಯೆ
Advertisement
ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ 25 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪವನ್ನು ವಾಂಖೆಡೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಸಿಬಿಐ (CBI) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಡ್ರಗ್ಸ್ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಅವರೊಂದಿಗೆ ಮಾತುಕತೆ ನಡೆಸಿ ಸಮೀರ್ ವಾಂಖೆಡೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಎನ್‍ಸಿಬಿ ಆರೋಪಿಸಿದೆ.
Advertisement
Advertisement
ಆರೋಪಿಯ ಕುಟುಂಬದೊಂದಿಗೆ ವಾಂಖೆಡೆ ಮಾತನಾಡಿರುವುದು ಎನ್‍ಸಿಬಿಯ ನೀತಿ ನಿಯಮಗಳಿಗೆ ವಿರುದ್ಧವಾಗಿದೆ. ತನಿಖಾಧಿಕಾರಿಯು ಆರೋಪಿಯ ಕುಟುಂಬದೊಂದಿಗೆ ಮಾತನಾಡುವ ಅಗತ್ಯ ಏನಿತ್ತು? ಎಂದು ನ್ಯಾಯಾಲಯದಲ್ಲಿ ಸಿಬಿಐ ವಾದಿಸಿತ್ತು. ಅಲ್ಲದೆ ಶಾರುಖ್ ಖಾನ್ ಅವರೊಂದಿಗೆ ಸಂಪರ್ಕಿಸಿದ್ದ ಮೊಬೈಲ್ ನೀಡಲು ನಿರಾಕರಿಸಿದ್ದರು. ಅಧಿಕಾರಿಗಳಿಗೆ ಹೆದರಿಸುವ ಪ್ರಯತ್ನ ಮಾಡಿದ್ದರು ಎಂದು ಸಿಬಿಐ ಆರೋಪಿಸಿದೆ.
ಸಿಬಿಐ ಕ್ರಮದ ವಿರುದ್ಧ ವಾಂಖೆಡೆ ಬಾಂಬೆ ಹೈಕೋರ್ಟ್ (Bombay High Court) ಮೊರೆ ಹೋಗಿದ್ದರು. ಅಲ್ಲಿಂದ ಅವರಿಗೆ ಮೇ 22 ರ ವರೆಗೆ ಬಂಧಿಸದಂತೆ ಕೋರ್ಟ್ ರಕ್ಷಣೆ ನೀಡಿತ್ತು. ಬಳಿಕ ಕೋರ್ಟ್ ಜೂನ್ 8 ರವರೆಗೆ ಬಂಧಿಸದಂತೆ ವಿಸ್ತರಿಸಿದೆ. ಇದನ್ನೂ ಓದಿ: ಅರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ – ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ