ಬೆಂಗಳೂರು: ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ ಗುಜರಾತ್ ಜೈಂಟ್ಸ್ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್‌ನ ಪ್ರಬಲ ಬೌಲಿಂಗ್ ದಾಳಿ ತುತ್ತಾಯಿತು. 20 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ತಂಡ ಆರಂಭಿಕ ಆಘಾತ ಎದುರಿಸಿತು. ಬಳಿಕ 60 ರನ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ತೀವ್ರ ಕುಸಿತ ಕಂಡಿತು. ಅಂತಿಮವಾಗಿ 9 ವಿಕೆಟ್ ನಷ್ಟಕ್ಕೆ 127 ರನ್ ದಾಖಲಿಸಿತು. ಗುಜರಾತ್ ನೀಡಿದ 128 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದೆಹಲಿ 15.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ರನ್ 131 ರನ್ ಹೊಡೆದು ಗೆಲುವು ಸಾಧಿಸಿತು.
Advertisement
Advertisement
ಡೆಲ್ಲಿ ಪರ ಜೆಸ್ ಜೊನಾಸೆನ್ 32 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ ಸಿಡಿಸಿ 61 ರನ್ ಹೊಡೆದು ತಂಡದ ಗೆಲುವಿಗೆ ಕೊಡುಗೆ ನೀಡಿದರು. ಶಫಾಲಿ ವರ್ಮಾ 27 ಎಸೆತಗಳಲ್ಲಿ 3 ಸಿಕ್ಸರ್, 5 ಬೌಂಡರಿಗಳ ನೆರವಿನಿಂದ 44 ರನ್‌ಗಳನ್ನು ಕಲೆ ಹಾಕಿದರು.
Advertisement
ಗುಜರಾತ್ ಪರ ಕಾಶ್ವೀ ಗೌತಮ್ 2 ವಿಕೆಟ್, ತನುಜಾ ಕನ್ವರ್ ಹಾಗೂ ಆಶ್ಲೀ ಗಾರ್ಡ್ನರ್ ತಲಾ 1 ವಿಕೆಟ್ ಕಬಳಿಸಿದರು.
Advertisement
ಗುಜರಾತ್ ಪರ ಭಾರತಿ ಫುಲ್ಮಾಲಿ 29 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 4 ಬೌಂಡರಿಗಳ ನೆರವಿನಿಂದ 40 ರನ್ ಗಳಿಸಿ ಔಟಾಗದೇ ಉಳಿದರು. ಡಿಯಾಂಡ್ರಾ ಡಾಟಿನ್ 24 ಎಸೆತಗಳಲ್ಲಿ 5 ಬೌಂಡರಿಗಳ ನೆರವಿನಿಂದ 26 ರನ್, ತನುಜಾ ಕನ್ವರ್ 24 ಎಸೆತಗಳಲ್ಲಿ 16 ರನ್, ತಂಡದ ನಾಯಕಿ ಬೆತ್ ಮೂನಿ 11 ಎಸೆತಗಳಲ್ಲಿ 10 ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಶಿಖಾ ಪಾಂಡೆ, ಮರಿಜಾನ್ನೆ ಕಪ್, ಅನ್ನಾಬೆಲ್ ಸದರ್ಲ್ಯಾಂಡ್ ತಲಾ 2 ವಿಕೆಟ್, ಟೈಟಾಸ್ ಸಾಧು ಹಾಗೂ ಜೆಸ್ ಜೊನಾಸೆನ್ ತಲಾ ಒಂದೊಂದು ವಿಕೆಟ್ ಪಡೆದರು.