ಚಿಕ್ಕಬಳ್ಳಾಪುರ : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, 56 ಲಕ್ಷ ಹಣ ಸಂಗ್ರಹವಾಗಿದೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಇಂದು ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 56,64,318 ರೂ. ಮೊತ್ತ ಸಂಗ್ರಹವಾಗಿದೆ.
ಇದರೊಂದಿಗೆ ರೂ 77,500 ಮೌಲ್ಯದ 2 ಕೆಜಿ 450 ಗ್ರಾಂ ಬೆಳ್ಳಿ, 13,600ರೂ ಮೌಲ್ಯದ 03 ಗ್ರಾಂ 40 ಮಿಲಿ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ. ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಲಕಿಗೆ ಕಿಡ್ನಿದಾನ ಮಾಡಿದ ತಾಯಿ!
ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಜಿ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗಾರಾಜ್, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಶಾಸ್ತ್ರಿ, ದೇವಾಲಯದ ಸೂಪರ್ ಡೆಂಟ್ ರಘು ಹುಚ್ಚಪ್ಪ ಸೇರಿದಂತೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.