ಚಿಕ್ಕಬಳ್ಳಾಪುರ: ಇಂದು ಕೇತು ಗ್ರಸ್ತ ಸೂರ್ಯಗ್ರಹಣ (Solar eclipse) ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಶ್ರೀ ಕ್ಷೇತ್ರ ಘಾಟಿಸುಬ್ರಮಣ್ಯಸ್ವಾಮಿ (Ghati Subramanya) ದೇವಾಲಯ ಹಾಗೂ ನಂದಿಬೆಟ್ಟದ ತಪ್ಪಲಿನ ಶ್ರೀ ಭೋಗನಂದೀಶ್ವರ (Bhoga Nandishwara Gudi) ದೇವಾಲಯವನ್ನು ಬಂದ್ ಮಾಡಲಾಗುತ್ತಿದೆ.
Advertisement
ಈ ಕುರಿತಂತೆ ಘಾಟಿಸುಬ್ರಮಣ್ಯಸ್ವಾಮಿ ದೇವಾಲಯ ಕಾರ್ಯ ನಿರ್ವಾಹಕಾಧಿಕಾರಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದು, ಕೇತು ಗ್ರಸ್ತ ಸೂರ್ಯಗ್ರಹಣ ಹಿನ್ನೆಲೆ ಶ್ರೀ ಘಾಟಿಸುಬ್ರಮಣ್ಯಸ್ವಾಮಿ ದರ್ಶನಕ್ಕೆ ಬೆಳಗ್ಗೆ 10:30ರವರೆಗೆ ಮಾತ್ರ ಅವಕಾಶವಿದೆ. ತದನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತಿದೆ. ಗ್ರಹಣದ ನಂತರ ರಾತ್ರಿ 7:45ಕ್ಕೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಇರಲಿದೆ. ಇಂದು ಬೆಳಗ್ಗೆ 6:30 ರಿಂದಲೇ ದೇವರಿಗೆ ಅಭಿಷೇಕ ವಿಶೇಷ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿದ್ದು, 08:00ಕ್ಕೆ ಮಹಾಮಂಗಳಾರತಿ ನೆರವೇರಿಸಲಾಗುವುದು. ಇನ್ನೂ ದೀಪಾವಳಿ ಹಬ್ಬ ಸೂರ್ಯ ಗ್ರಹಣದ ನಿಮಿತ್ತ ಬೆಳಗ್ಗೆಯೇ ದೇವಾಲಯಕ್ಕೆ ಭಕ್ತರ ದಂಡು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಮತ್ತೆ ಉದ್ವಿಗ್ನ – ಹರ್ಷನ ಮನೆ ಮುಂದೆ ಲಾಂಗು, ಮಚ್ಚು ಹಿಡಿದು ಓಡಾಟ
Advertisement
Advertisement
ಮತ್ತೊಂದೆಡೆ 27 ವರ್ಷಗಳ ನಂತರ ದೀಪಾವಳಿಯಂದು ಕೇತುಗ್ರಸ್ಥ ಸೂರ್ಯಗ್ರಹಣ ಸಂಭವಿಸುತ್ತಿರುವುದರಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ತಪ್ಪಲಿನ ಶ್ರೀ ಭೋಗನಂದೀಶ್ವರ ದೇವಾಲಯದ ಬಾಗಿಲು ಬಂದ್ ಮಾಡಲಾಗುತ್ತಿದೆ. ಜೊತೆಗೆ ನಂದಿಗಿರಿಧಾಮದ ಮೇಲಿನ ಶ್ರೀ ಯೋಗನಂದೀಶ್ವರನ ಆಲಯದ ಬಾಗಿಲನ್ನು ಸಹ ಮುಚ್ಚಲಾಗುತ್ತಿದೆ. ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದ್ದು, ತದನಂತರ ದೇವಾಲಯದ ಬಾಗಿಲು ಕ್ಲೋಸ್ ಮಾಡಲಾಗುತ್ತದೆ ಎಂದು ದೇವಾಲಯದ ಕಾರ್ಯನಿರ್ವಹಕಾಧಿಕಾರಿ ನಾಗರಾಜ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇನ್ನೂ ಗ್ರಹಣ ಮುಗಿದ ನಂತರವೂ ಇಂದು ದೇವಾಲಯದ ಬಾಗಿಲು ತೆರಯುವುದಿಲ್ಲ. ಬದಲಾಗಿ ನಾಳೆ ಎಂದಿನಂತೆ ಬೆಳಗ್ಗೆ 7 ಗಂಟೆ ನಂತರ ತೆರೆಯಲಾಗುವುದು. ಇದನ್ನೂ ಓದಿ: ದುಷ್ಕರ್ಮಿಗಳಿಂದ ಭಯ ಹುಟ್ಟಿಸೋ ಪ್ರಕರಣ- ನಮಗೆ ಸೂಕ್ತ ರಕ್ಷಣೆ ಬೇಕು: ಹರ್ಷ ಸಹೋದರಿ