ಲಕ್ನೋ: ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳನ್ನು ಅತ್ಯಾಚಾರವೆಸಗಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗಾಝಿಯಾಬಾದ್‍ನಲ್ಲಿ ನಡೆದಿದೆ.
ಸಂತ್ರಸ್ತೆ ಶುಕ್ರವಾರ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಮೆಹತಾಬ್ ನನ್ನು ಭಾನುವಾರ ಬಂಧಿಸಲಾಗಿದೆ. ಸಂತ್ರಸ್ತೆ ದೂರಿನಲ್ಲಿ ಮೂರು ವ್ಯಕ್ತಿಗಳನ್ನು ಹೆಸರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ನಡೆದಿದ್ದೇನು?: ಫೆಬ್ರವರಿ 7 ರಂದು ಹೋಟೆಲೊಂದರಲ್ಲಿ ಕೂಲ್ ಡ್ರಿಂಕ್‍ಗೆ ಮತ್ತು ಬರುವ ಔಷಧಿ ಬೆರೆಸಿ ಸಂತ್ರಸ್ತೆಗೆ ಆರೋಪಿ ಮೆಹತಾಬ್ ನೀಡಿದ್ದಾನೆ. ನಂತರ ಅದನ್ನು ಕುಡಿದ ಸಂತ್ರಸ್ತೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಬಳಿಕ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಅತ್ಯಾಚಾರ ಎಸಗಿದ್ದ ವಿಡಿಯೋವನ್ನ ಆತನ ಜೊತೆಗಿದ್ದ ಸ್ನೇಹಿತ ವಿಡಿಯೋ ಮಾಡಿದ್ದಾನೆ.
ಅಷ್ಟೇ ಅಲ್ಲದೇ ಸಂತ್ರಸ್ತೆ ತನ್ನ ಧರ್ಮವನ್ನು ಬದಲಾಯಿಸಿಕೊಂಡು ತನ್ನನ್ನು ಮದುವೆಯಾಗದೆ ಇದ್ದಲ್ಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡುವುದಾಗಿ ಮೆಹತಾಬ್ ನನಗೆ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ.
ಫೆಬ್ರವರಿ 15 ರಂದು, ಮೆಹತಾಬ್, ಆಕೆಯ ಬಳಿಯಿಂದ ಮೊಬೈಲ್ ಕಿತ್ತುಕೊಂಡು ಆಕೆಯನ್ನು ಚಲಿಸುವ ಆಟೋದಿಂದ ಹೊರಹಾಕಿದ್ದಾನೆ. ಮರುದಿನ ಸಂತ್ರಸ್ತೆ ದೂರು ಸಲ್ಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.