LatestMain PostNationalUncategorized

ಗುಲಾಂ ನಬಿ ಆಜಾದ್ ಮುಂದಿನ ಉಪರಾಷ್ಟ್ರಪತಿ?

ನವದೆಹಲಿ: ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಉನ್ನತಮಟ್ಟದ ಸಭೆ ನಡೆಸಿದ್ದು, ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್‍ರನ್ನು ಉಪರಾಷ್ಟ್ರಪತಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಇದನ್ನೂ ಓದಿ: ಗುಲಾಂ ನಬಿ ಆಜಾದ್‌ ಕಾರ್ಯ ನೆನೆದು ಭಾವುಕರಾದ ಪ್ರಧಾನಿ ಮೋದಿ

ಬಿಜೆಪಿ ವತಿಯಿಂದ ಗುಲಾಂ ನಬಿ ಆಜಾದ್‍ರನ್ನು ರಾಜ್ಯಸಭೆಗೆ ನಾಮಿನೇಟ್ ಮಾಡಿ, ಉಪರಾಷ್ಟ್ರಪತಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡುವ ಬಗ್ಗೆ ತಯಾರಿಗಳು ನಡೆದಿವೆ ಎಂದು ಮೂಲಗಳಿಂದ ವರದಿಯಾಗಿದ್ದು, ಫೆಬ್ರವರಿ ತಿಂಗಳಲ್ಲಿ ಪಂಚರಾಜ್ಯ ಚುನಾವಣೆ ಬಳಿಕ ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ ಭಾರತಕ್ಕೆ ಆಹ್ವಾನಿಸಿದ ಪ್ರಧಾನಿ ಮೋದಿ

ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣೆಯ ಎಲೆಕ್ಟ್ರಾಲ್ ಕಾಲೇಜಿನಲ್ಲಿ ಮಾಡಬಹುದಾದ ಮಾರ್ಪಾಡುಗಳ ಬಗ್ಗೆ ಮೋದಿ ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳವ ಸಾಧ್ಯತೆಗಳಿದ್ದು, ಇದಾದ ಬಳಿಕವೇ ಬಿಜೆಪಿ, ಪ್ರಾದೇಶಿಕ ಪಕ್ಷಗಳ ಮೇಲೆ ಎಷ್ಟರ ಮಟ್ಟಿಗೆ ಅವಲಂಬಿಸಲಿದೆ ಎಂಬುದು ಗೊತ್ತಾಗಲಿದೆ. ರಾಷ್ಟ್ರಪತಿ ಆಯ್ಕೆಗೆ ಶಾಸಕರು, ಸಂಸದರು ಮತ ಚಲಾಯಿಸಬೇಕಾಗುತ್ತದೆ. ಆದರೆ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಸದರು ಮಾತ್ರ ಮತ ಹಾಕಲಿದ್ದಾರೆ. ಇದನ್ನೂ ಓದಿ: ಏನು ಹೇಳುತ್ತೇನೋ ಅದನ್ನೇ ಮಾಡುತ್ತೇನೆ, ವಿಶ್ವಾಸ ಉಳಿಸಿಕೊಳ್ಳುತ್ತೇನೆ: ರಾಹುಲ್ ಗಾಂಧಿ

Leave a Reply

Your email address will not be published.

Back to top button