ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ಬಳಿಕ ಅಲ್ಲಿ ಯಾವುದೇ ಅಶಾಂತಿ ಪರಿಸ್ಥಿತಿ ನಿರ್ಮಾಣವಾಗದಂತೆ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಈ ವ್ಯವಸ್ಥೆಗಳ ಮೇಲ್ವಿಚಾರಣೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇರ ಕಾಶ್ಮೀರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಸ್ಥಳೀಯರೊಂದಿಗೆ ಊಟ ಸೇವಿಸಿದ್ದ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
Ghulam Nabi Azad, Congress on video of National Security Advisor (NSA) Ajit Doval interacting with locals in Shopian yesterday: Paise dekar aap kisiko bhi saath le sakte ho. #JammuAndKashmir pic.twitter.com/h3amg96Qmu
— ANI (@ANI) August 8, 2019
Advertisement
ದೋವಲ್ ಅವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಕೂಡ ವ್ಯಕ್ತವಾಗಿತ್ತು. ಅಲ್ಲದೇ ತಮ್ಮ ಭೇಟಿಯ ಬಳಿಕ ಕೇಂದ್ರಕ್ಕೆ ವರದಿ ನೀಡಿದ್ದ ಅವರು, ಸರ್ಕಾರದ ನಿರ್ಧಾರವನ್ನು ಅಲ್ಲಿನ ಸ್ಥಳೀಯರು ಸ್ವಾಗತಿಸುತ್ತಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿ ತೃಪ್ತಿಕರವಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರ ಮತ್ತೆ ರಾಜ್ಯ ಸ್ಥಾನಮಾನ ಮರಳಿ ಪಡೆಯಲಿದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಜನರು ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದರು.
Advertisement
Advertisement
ಈ ಕುರಿತು ಪತ್ರಿಕ್ರಿಯೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಗುಲಾಮ್ ನಬಿ ಅಜಾದ್ ಅವರು ಟೀಕೆ ಮಾಡಿದ್ದು, ದುಡ್ಡು ಕೊಟ್ಟರೆ ಎಲ್ಲಿ ಬೇಕಾದರೂ ಪಡೆಯಬಹುದು ಎಂದಿದ್ದಾರೆ. ವರದಿಗಳ ಅನ್ವಯ ಅವರು ಶ್ರೀನಗರಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಆದರೆ ಅವರನ್ನು ವಿಮಾನ ನಿಲ್ದಾಣದಿಂದ ವಾಪಸ್ ಕಳುಹಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
Advertisement
NSA #AjitDoval eating lunch with Kashmiri locals in Shopian. Normalcy being slowly restored in the valley. What a remarkable gesture by the NSA! Interacting with people on ground and checking on their safety, security and well being! pic.twitter.com/lLN0Gw6TKn
— Narendra Modi fan (@narendramodi177) August 7, 2019