ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಶುಕ್ರವಾರ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಆಜಾದ್ ಅವರು ಕೆಲ ದಿನಗಳ ಹಿಂದಷ್ಟೇ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ಹಾಗೂ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್‌ನ ರಾಜಕೀಯ ವ್ಯವಹಾರಗಳ ಸಮಿತಿಗೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ದೆಹಲಿಗೆ ಹೊರಟ ಬಿಎಸ್‌ವೈ – ಇಂದು ಸಂಜೆ ಮೋದಿ ಭೇಟಿ
ಕಾಂಗ್ರೆಸ್‌ನ ನಾಯಕತ್ವ ಬದಲಾವಣೆ ಸೇರಿದಂತೆ ಪಕ್ಷದ ಆಮೂಲಾಗ್ರ ಬದಲಾವಣೆಗೆ ಆಗ್ರಹಿಸಿದ್ದ 23 ಮಂದಿ ಬಂಡಾಯ ನಾಯಕರಲ್ಲಿ ಆಜಾದ್ ಸಹ ಒಬ್ಬರು.
ಈಚೆಗಷ್ಟೇ ಆಜಾದ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ (ಜೆಕೆಪಿಸಿಸಿ) ನಿಯೋಜಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅನಾರೋಗ್ಯ ಕಾರಣಗಳಿಂದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಆಜಾದ್ ನಿರಾಕರಿಸಿದ್ದರು ಎಂದು ಮೂಲಗಳು ತಿಳಿಸಿದ್ದವು. ಇದನ್ನೂ ಓದಿ: ಉತ್ತರ ಪ್ರದೇಶ, ತ್ರಿಪುರ ಬಳಿಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?