LatestMain PostNational

ಜಮ್ಮು-ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗ್ತಿದ್ದಂತೆಯೇ ಸ್ಥಾನ ತೊರೆದ ಗುಲಾಂ ನಬಿ ಆಜಾದ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿ ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗುತ್ತಿದ್ದಂತೆಯೇ ಗುಲಾಂ ನಬಿ ಆಜಾದ್ ಅವರು ಆರೋಗ್ಯದ ಕಾರಣಗಳನ್ನು ನೀಡಿ, ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲು ನಿರಾಕರಿಸಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: `ಮುಸ್ಲಿಂ’ ಏರಿಯಾದಲ್ಲಿ ಸಾವರ್ಕರ್ ಫೋಟೋ ಬೇಕಿತ್ತಾ..? – ಸಿದ್ದರಾಮಯ್ಯ ಹೇಳಿಕೆ ಫುಲ್ ವೈರಲ್

ಮಂಗಳವಾರ ಹೊಸದಾಗಿ ಕಾಂಗ್ರೆಸ್ ಪ್ರಚಾರ ಸಮಿತಿಯನ್ನು ರಚಿಸಲಾಗಿದೆ. ತಾರಿಕ್ ಹಮೀದ್ ಕರ್ರಾ ಅವರನ್ನು ಪ್ರಚಾರ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು ಮತ್ತು ಜಿ.ಎಂ ಸರೂರಿ ಸಂಚಾಲಕರಾಗಿದ್ದರು. ಇದೇ ವೇಳೆ ಆಜಾದ್ ನಿಕಟವರ್ತಿ ವಿಕಾರ್ ರಸೋಲ್ ವಾನಿ ಅವರನ್ನು ಜಮ್ಮು-ಕಾಶ್ಮೀರ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಯಿತು. ಇದನ್ನೂ ಓದಿ: BBMP: ವಾರ್ಡ್‌ವಾರು ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ

Live Tv

Leave a Reply

Your email address will not be published.

Back to top button