ನವದೆಹಲಿ: ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (DPAP) ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಮುಂಬರುವ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ (Anantnag-Rajouri) ಲೋಕಸಭಾ ಕ್ಷೇತ್ರದಿಂದ ಗುಲಾಂ ನಬಿ ಆಜಾದ್ (Ghulam Nabi Azad) ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಪಕ್ಷ ತಿಳಿಸಿದೆ. ಆಜಾದ್ ಅವರು ಹಿಂದೆ ಸರಿದ ಬಳಿಕ ಇದೀಗ ಮೊಹಮ್ಮದ್ ಸಲೀಂ ಪರ್ರೆ ಅನಂತನಾಗ್-ರಾಜೌರಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಬಹುದು ಎಂದು ಮೂಲಗಳು ತಿಳಿಸಿವೆ.
Advertisement
Advertisement
ಈ ಸಂಬಂಧ ಕಾಶ್ಮೀರದ ಡಿಪಿಎಪಿಯ ಪ್ರಾಂತೀಯ ಅಧ್ಯಕ್ಷ ಮೊಹಮ್ಮದ್ ಅಮೀನ್ ಭಟ್ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬೆಳವಣಿಗೆಯನ್ನು ಆಜಾದ್ ಖಚಿತಪಡಿಸಿದ್ದಾರೆ. ಅವರು ಲೋಕಸಭಾ ಚುನಾವಣೆಗೆ (Loksabha Elections 2024) ಸ್ಪರ್ಧಿಸುವುದಿಲ್ಲ. ಹೀಗಾಗಿ ಅನಂತನಾಗ್-ರಜೌರಿ ಕ್ಷೇತ್ರಕ್ಕೆ ವಕೀಲ ಸಲೀಂ ಪರ್ರೆ ಡಿಪಿಎಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದರು.
Advertisement
ಆಜಾದ್ ಯೂಟರ್ನ್: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸಲು ಮತ್ತು ಅಲ್ಲಿನ ನಿವಾಸಿಗಳ ಭೂಮಿ ಮತ್ತು ಉದ್ಯೋಗ ಹಕ್ಕುಗಳ ರಕ್ಷಣೆಗಾಗಿ ತನ್ನ ಹೋರಾಟವನ್ನು ಮುಂದುವರಿಸಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ಈ ಹೇಳಿಕೆ ಕೊಟ್ಟ ಕೆಲವೇ ದಿನಗಳಲ್ಲಿ ಇದೀಗ ಆಜಾದ್ ಯೂಟರ್ನ್ ಹೊಡೆದಿದ್ದಾರೆ.
Advertisement
ಆಜಾದ್ ಅವರು 2022 ರಲ್ಲಿ ಕಾಂಗ್ರೆಸ್ ತೊರೆದರು. ಈ ಮೂಲಕ ಪಕ್ಷದೊಂದಿಗಿನ ಐದು ದಶಕಗಳ ಸಂಬಂಧವನ್ನು ಕೊನೆಗೊಳಿಸಿದರು. ಬಳಿಕ ಡಿಪಿಎಪಿಯನ್ನು ಸೇರಿಕೊಂಡರು. ಇದನ್ನೂ ಓದಿ: ಫಸ್ಟ್ ಟೈಂ ಅತಿ ಕಡಿಮೆ ಸಂಖ್ಯೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ