ಬೆಂಗಳೂರು: ಈ ಬಾರಿಯ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಕಸ್ತೂರಿ ಅರಿಶಿನ-ಕುಂಕುಮ, 6 ಹಸಿರು ಬಳೆಗಳ ವಿತರಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ಹೊರಡಿಸಿದ್ದಾರೆ.
Advertisement
ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಬರುವ ಮಹಿಳೆಯರಿಗೆ ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಭಿಮಾನಿಯಿಂದ ಒಂದೂವರೆ ಕೆ.ಜಿ ತೂಕದ ಬೆಳ್ಳಿ ಮೂರ್ತಿ ಗಿಫ್ಟ್!
Advertisement
Advertisement
ಮುಜರಾಯಿ ವ್ಯಾಪ್ತಿಯ ದೇಗುಲಗಳು: ಬಸವನಗುಡಿಯ ದೊಡ್ಡಗಣಪತಿ ದೇವಾಲಯ, ಮಹಾಲಕ್ಷ್ಮೀಪುರ ಬಡಾವಣೆಯ ಶ್ರೀ ಪ್ರಸನ್ನ ವೀರಾಂಜನೇಯಸ್ವಾಮಿ ದೇವಾಲಯ, ಜಯನಗರ 4ನೇ ಬಡಾವಣೆಯ ಶ್ರೀ ವಿನಾಯಕ ಸ್ವಾಮಿ ದೇವಾಲಯ, ಗವೀಪುರಂ ರಸ್ತೆಯ ಗವಿಗಂಗಾಧರೇಶ್ವರಸ್ವಾಮಿ ದೇವಾಲಯ, ವಸಂತಪುರದ ಶ್ರೀ ವಸಂತವಲ್ಲಭರಾಯಸ್ವಾಮಿ ದೇವಾಲಯ, ಯಲಹಂಕದ ಗುಂಡಾಂಜನೇಯ ಸ್ವಾಮಿ ದೇವಾಲಯ, ಕೊಡಿಗೇಹಳ್ಳಿ ಗೇಟ್.
Advertisement
ಕೆ.ಆರ್ ರಸ್ತೆಯ ಕೋಟೆ ಶ್ರೀ ವೆಂಕಟರಮಣಸ್ವಾಮಿ ದೇವಾಲಯ, ಬೆಂಗಳೂರು ದಕ್ಷಿಣದಲ್ಲಿರುವ ಕುಮಾರಸ್ವಾಮಿ ದೇವಾಲಯ, ಹಲಸೂರಿನ ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನ, ಸ್ವಾಮಿ ವಿವೇಕಾನಂದ ರಸ್ತೆಯಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ಮಲ್ಲೇಶ್ವರಂನಲ್ಲಿರುವ ಶ್ರೀ ವೇಣುಗೋಪಾಲ ಕೃಷ್ಣಸ್ವಾಮಿ ದೇವಾಲಯ, ಮಲ್ಲೇಶ್ವರಂನಲ್ಲಿರುವ ಶ್ರೀ ಲಕ್ಮೀನರಸಿಂಹಸ್ವಾಮಿ ದೇವಾಲಯ, ಬಳೆಪೇಟೆ ಮುಖ್ಯ ರಸ್ತೆಯಲ್ಲಿರುವ ಶ್ರೀ ಲಕ್ಮೀನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ ಸಂಪಿಗೆ ರಸ್ತೆಯಲ್ಲಿರುವ ಶ್ರೀ ಕಾಡುಮಲ್ಲೇಶ್ವರಸ್ವಾಮಿ ದೇವಾಲಯ.