8ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದಲೇ ರೇಪ್ – ಆಸ್ಪತ್ರೆಗೆ ದಾಖಲಾದ 20 ದಿನಗಳ ಬಳಿಕ ಸಾವು

Public TV
2 Min Read
Girl 14 Raped By School Teacher In Uttar Pradesh Dies After Months Of Treatment

ಲಕ್ನೋ: ದೇಶದಾದ್ಯಂತ ಭುಗಿಲೆದ್ದಿರುವ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ (Rape) ಮತ್ತು ಕೊಲೆ ಪ್ರಕರಣದ ವಿರುದ್ಧ ರಾಷ್ಟ್ರವ್ಯಾಪಿ ಆಕ್ರೋಶದ ನಡುವೆ, 14 ವರ್ಷದ ವಿದ್ಯಾರ್ಥಿನಿ (Student) ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ನಡೆದಿದೆ.

ದಾಖಲಾದ 20 ದಿನಗಳ ಬಳಿಕ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಆಸ್ಪತ್ರೆಯಲ್ಲಿ (Banaras Hindu University Hospital) ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸಂತ್ರಸ್ತೆಯನ್ನು ಸೋನಭದ್ರ ಜಿಲ್ಲೆ ದುಡ್ಡಿ ಗ್ರಾಮದ ನಿವಾಸಿಯೆಂದು ಗುರುತಿಸಲಾಗಿದ್ದು 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆರೋಪಿಯನ್ನು ಉತ್ತರ ಪ್ರದೇಶದ ಬಲ್ಲಿಯಾ ಗ್ರಾಮದ ನಿವಾಸಿ. ವಿಶಾಂಬರ್ ಎಂದು ಗುರುತಿಸಲಾಗಿದ್ದು ಈಗ ಪರಾರಿಯಾಗಿದ್ದಾನೆ. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ವಿಪಕ್ಷಗಳ ಆರೋಪ ಏನು? ಬೆಳಕಿಗೆ ಬಂದಿದ್ದು ಹೇಗೆ?

Stop Rape

ಆರೋಪಿಯು ಆಕೆ ಓದುತ್ತಿದ್ದ ಶಾಲೆಯಲ್ಲಿ ಕ್ರೀಡಾ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದನು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಹೇಳಿದ್ದನು. ಅದಾದ ಬಳಿಕ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಸಾರ್ವಜನಿಕರಿಂದಾಗುವ ಅವಮಾನಕ್ಕೆ ಹೆದರಿ ಅವಳು ಏನು ಮಾಡಲಿಲ್ಲ. ಆದರೆ ಕ್ರಮೇಣವಾಗಿ ಆಕೆಯ ಆರೋಗ್ಯ ಹದಗೆಟ್ಟಿತು. ಚಿಕಿತ್ಸೆಗಾಗಿ ಅವಳನ್ನು ಛತ್ತಿಸ್‌ಗಢದಲ್ಲಿರುವ ಸಂಬಂಧಿಕರ ಮನೆಗೆ ಕಳುಹಿಸಲಾಯಿತು. ಆದರೂ ಅವಳ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. ಆ ಸಮಯದಲ್ಲಿ ಸಂತ್ರಸ್ತೆ ಮೌನ ಮುರಿದು ಆದ ಘಟನೆಯ ಕುರಿತು ತನ್ನ ಚಿಕ್ಕಮ್ಮನಿಗೆ ತಿಳಿಸಿದ್ದಾಳೆ ಎಂದು ಸಂತ್ರಸ್ತೆಯ ಕುಟುಂಬದವರು ತಿಳಿಸಿದ್ದಾರೆ.

ಸಂತ್ರಸ್ತರ ಕುಟುಂಬರಿಗೆ ಸಾರ್ವಜನಿಕರಿಂದ ಅವಮಾನವಾಗುವ ಭಯ ಇತ್ತು. ಇದನ್ನು ಸದುಪಯೋಗಪಡಿಸಿಕೊಂಡು ಆರೋಪಿಯು ಅವರಿಗೆ 30 ಸಾವಿರ ರೂಪಾಯಿಯನ್ನು ಕೊಟ್ಟು ಸುಮ್ಮನಿರಲು ತಿಳಿಸಿದ್ದಾನೆ. ಇದರಿಂದ ಅವರು ಪೊಲೀಸರ ಬಳಿ ದೂರು ದಾಖಲಿಸಲಿಲ್ಲ. ಕ್ರಮೇಣ ಅವಳ ಆರೋಗ್ಯ ಹದಗೆಡುತ್ತಾ ಹೋದಂತೆ ಜುಲೈ 10ರಂದು ಸಂತ್ರಸ್ತೆಯ ತಂದೆ, ವಿಶಾಂಬರ್ ವಿರುದ್ಧ ದೂರು ದಾಖಿಲಿಸಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಆರೋಪಿಯನ್ನು ಅರೆಸ್ಟ್ ಮಾಡಲು ಎರಡು ತಂಡಗಳನ್ನು ಸಿದ್ಧಪಡಿಸಲಾಗಿದೆ ಮತ್ತು ಶೀಘ್ರದಲ್ಲೇ ಆರೋಪಿಯನ್ನು ಪತ್ತೆ ಹಚ್ಚಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ – ಸಿಎಂ ಮುಂದಿರುವ ಆಯ್ಕೆ ಏನು?

ಕೋಲ್ಕತ್ತಾ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ 31 ವರ್ಷದ ಮಹಿಳಾ ಟ್ರೈನಿ ವೈದ್ಯೆಯ ಕೆಲಸದ ಸಮಯದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಸಂಭವಿಸಿತ್ತು. ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಕೆಯ ಅರೆಬೆತ್ತಲೆ ಶವ ಪತ್ತೆಯಾಗಿದ್ದು, ಈ ಪ್ರಕರಣ ಸಂಬಂಧ ರಾಷ್ಟ್ರವ್ಯಾಪಿ ಆಕ್ರೋಶದ ನಡುವೆ ಈ ಘಟನೆ ಬೆಳಕಿಗೆ ಬಂದಿದೆ.

Share This Article