Connect with us

Crime

ಓವರ್ ಟೇಕ್ ಮಾಡುವ ಭರದಲ್ಲಿ ಪ್ರಾಣ ಕಳ್ಕೊಂಡ ಯುವಕ-ಯುವತಿ

Published

on

ರಾಮನಗರ: ಬೈಕ್ ಹಾಗೂ ಕೆಎಸ್‍ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಗೆರೆ ಬಳಿ ನಡೆದಿದೆ.

ಬೆಂಗಳೂರು-ಕನಕಪುರ ಮಾರ್ಗದ ಸೋಮನಹಳ್ಳಿ ಸಮೀಪದ ನೆಟ್ಟಗೆರೆ ಬಳಿ ಈ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಬೆಂಗಳೂರಿನಿಂದ ಕನಕಪುರ ಕಡೆಗೆ ಕೆಎ-01 ಎಚ್ ಆರ್ -5631 ನ ಸ್ಕೂಟಿಯಲ್ಲಿ ಯುವಕ ಮತ್ತು ಯುವತಿ ಹೋಗುತ್ತಿದ್ದರು. ನೆಟ್ಟಗೆರೆ ಬಳಿ ಕೆಎಸ್ ಆರ್ ಟಿಸಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿಯಲ್ಲಿ ಮುನ್ನುಗ್ಗಿದ್ದಾರೆ.

ಈ ವೇಳೆ ಬಸ್ ಸಹ ವೇಗವಾಗಿ ಚಲಿಸಿದ್ದು, ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಹ ಕೆಳಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಕಗ್ಗಲೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಕುರಿತು ಕಗ್ಗಲೀಪುರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Click to comment

Leave a Reply

Your email address will not be published. Required fields are marked *

www.publictv.in