CrimeLatestMain PostNational

ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರ

ರಾಂಚಿ: ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪದಲ್ಲಿ 12ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ.

RAPE CASE

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಸಹೋದರಿಯನ್ನು ಭೇಟಿಯಾಗಲು ತೆರಳುತ್ತಿದ್ದ ಬಾಲಕಿಯನ್ನು ಜಾರ್ಖಂಡ್‍ ಪಲಾಮು ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಾಲಕಿಗೆ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಜಾರ್ಖಂಡ್‍ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ವಿಜಯ್ ಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ:  ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ – ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

POLICE JEEP

ಗರ್ವಾ ಜಿಲ್ಲೆಯ ನಿವಾಸಿಯಾದ ಬಾಲಕಿ ಪಲಾಮು ಜಿಲ್ಲೆಯ ಚೈನ್‍ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸೆಮ್ರಾ ಗ್ರಾಮಕ್ಕೆ ಭೇಟಿ ನೀಡುತ್ತಿದ್ದಳು. ಅಲ್ಲಿ ಆಕೆಯ ಸಹೋದರಿ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರಿಯನ್ನು ನೋಡಲು ಹೋಗುತ್ತಿದ್ದವೇಳೆ, ಸೆಮ್ರಾ ಮೂಲದ ಇಬ್ಬರು ಆರೋಪಿಗಳು ತಮ್ಮ ಜೀಪಿನಲ್ಲಿ ಹುಡುಗಿಯನ್ನು ಕೂರಿಸಿಕೊಂಡು ನಿರ್ಜನ ಪ್ರದೇಶದಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.  ಇದನ್ನೂ ಓದಿ: ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ: ಮಠಾಧೀಶರಿಗೆ ವಿದ್ಯಾರ್ಥಿನಿ ಸವಾಲು

Leave a Reply

Your email address will not be published.

Back to top button