– ಓರ್ವ ರೇಪ್ ಮಾಡಿದ್ರೆ ನಾಲ್ವರು ಕಾವಲು ನಿಂತ್ರು
ಚಂಡೀಗಢ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಂಬಂಧ ಹರಿಯಾಣದ ರಿವಾರಿ ಪೊಲೀಸರು 4 ಮಂದಿಯನ್ನು ಬುಧವಾರ ಬಂಧಿಸಿದ್ದಾರೆ.
ಬಂಧಿತರನ್ನು ಹನುಮಾನ್, ನರೇಂದರ್, ಮೋನು ಹಾಗೂ ಸಂಜು ಎಂದು ಗುರುತಿಸಲಾಗಿದೆ. ಕೃತ್ಯದ ಪ್ರಮುಖ ಆರೋಪಿ ಕಮಲ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನಾನು ಸೋಮವಾರ ಸಂಜೆ ಟ್ಯೂಷನ್ ಕ್ಲಾಸಿಗೆ ಹೋಗುತ್ತಿದ್ದೆ. ಈ ವೇಳೆ ನನ್ನನ್ನು ಕೆಲ ಹುಡುಗರು, ತಮಾಷೆಗೆಂದು ಅಪಹರಿಸಿ ಕೋಣೆಯೊಳಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಒಬ್ಬ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಉಳಿದವರು ಆತನಿಗೆ ಕಾವಲು ನಿಂತರು ಎಂದು ಬಾಲಕಿ ಪೊಲೀಸರ ಬಳಿ ವಿವರಿಸಿದ್ದಾಳೆ.
ಇಷ್ಟು ಮಾತ್ರವಲ್ಲದೇ ಈ ವಿಚಾರವನ್ನು ಪೊಲೀಸರ ಮುಂದೆ ಬಹಿರಂಗಪಡಿಸಿದರೆ ಮುಂದಿನ ದಿನಗಳಲ್ಲಿ ಭೀಕರ ಪರಿಣಾಮ ಎದುರಿಸಬೇಕಾದಿತು ಎಂದು ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದಾರೆ.
ತನ್ನ ಮೇಲೆ ನಡೆಸಿದ ನೀಚ ಕೃತ್ಯದ ವೇಲೆ ಬಾಲಕಿ ಹೇಗೋ ತಪ್ಪಿಸಿಕೊಂಡು ಮನೆಗೆ ಬಂದು ನಡೆದ ಘಟನೆಯನ್ನು ಹೆತ್ತವರ ಬಳಿ ವಿವರಿಸಿದ್ದಾಳೆ. ಕೂಡಲೇ ಪೋಷಕರು ಸ್ಥಳಿಯ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಐವರು ಬಾಲಕ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಆಧಾರದ ಮೇಲೆ ಐವರಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂಬುದಾಗಿ ವರದಿಯಾಗಿದೆ.