ಚೆನ್ನೈ: ಊಟದ ಬಿಡುವಿನಲ್ಲಿ ಮನೆಗೆ ಹೋಗಬೇಕಿದ್ದ ಬಾಲಕಿ ಶಾಲೆಯ ಅಡುಗೆ ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ದಿಂಡಿಗಲ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಊಟದ ಬಿಡುವಿನಲ್ಲಿ ಮನೆಗೆ ಹೋಗಬೇಕಿತ್ತು. ಆಕೆ ಮನೆಗೆ ಬಾರದೇ ಇದ್ದಾಗ ಪೋಷಕರು ಗಾಬರಿಗೊಂಡು ಶಾಲೆಗೆ ಧಾವಿಸಿದ್ದಾರೆ. ಇದನ್ನೂ ಓದಿ: ಬಂಗಾರ ಕರಗಿಸಿ ಕೊಡುವುದಾಗಿ ನಂಬಿಸಿ ವಂಚನೆ ಮಾಡಿದ ವ್ಯಾಪಾರಿಯ ಬಂಧನ
Advertisement
Advertisement
ಈ ಸಮಯದಲ್ಲಿ ಶಾಲೆಯ ಅಡುಗೆ ಕೋಣೆಯಲ್ಲಿ ಬಾಲಕಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತೀವ್ರವಾದ ಸುಟ್ಟ ಗಾಯಗಳಿಂದ ಬಾಲಕಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆಯಲ್ಲಿ ಮೃತ ಪಟ್ಟಿದ್ದಾಳೆ. ಇದನ್ನೂ ಓದಿ: ಕೆಮಿಕಲ್ಸ್ ಫ್ಯಾಕ್ಟರಿ ಸ್ಫೋಟ – 2 ಸಾವು, 15 ಮಂದಿಗೆ ಗಾಯ
Advertisement
ಬಾಲಕಿಯ ಈ ಸ್ಥಿತಿಗೆ ಕಾರಣ ಏನು ಎಂಬುದು ನಿಖರವಾಗಿ ಪತ್ತೆಯಾಗಿಲ್ಲ. ಆದರೆ ಈ ಹಿಂದೆ ಬಾಲಕಿ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಳು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವಂತೆ ತೋರುತ್ತಿಲ್ಲವಾದರೂ ಅಲ್ಲಿನ ನಿವಾಸಿಗಳು ಬಾಲಕಿಯ ನ್ಯಾಯಕ್ಕಾಗಿ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.