ಬೆಂಗಳೂರು: ಈ ಹಿಂದೆ ಧರ್ಮಸ್ಥಳದಲ್ಲಿ (Dharmasthala) ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾಟ್ಮೆರ್ಂಟ್‍ನಿಂದ ಜಿಗಿದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ವಿಜಯಲಕ್ಷ್ಮಿ (17) ವರ್ಷ ಮೃತ ಯುವತಿ. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಇಲ್ಲಿನ ಬ್ರೈಡ್ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯ ರಬ್ಬರು ರಕ್ಷಣೆ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ರು. ಪೋಷಕರಿಗೆ ಫೋನ್ ಮಾಡಿ ತಿಳಿ ಹೇಳಿ ಯುವತಿ ಯನ್ನು ವಾಪಸ್ ಕಳುಹಿಸಿದ್ರು. ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಬಂದು ಅಪಾರ್ಟ್ ಮೆಂಟ್ ನ ಟೆರೇಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ
ಇತ್ತ ಪುತ್ರಿ ಕಾಣೆಯಾಗಿದ್ದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೈಂಟ್ ಕೂಡ ದಾಖಲಾಗಿತ್ತು. ಸದ್ಯ ಯುವತಿ ಆತ್ಮಹತ್ಯೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]