ಬೆಂಗಳೂರು: ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿಯ (Kadugodi) ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.
ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಮೃತ ಬಾಲಕಿಯನ್ನು ಅವಂತಿಕಾ ಚೌರಾಸಿಯಾ (15) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ
Advertisement
Advertisement
ಕಾಡುಗೋಡಿಯ ಅಪಾರ್ಟ್ಮೆಂಟ್‌ನಲ್ಲಿದ್ದ ಬಾಲಕಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದಳು. ಎಸ್‌ಎಸ್‌ಎಲ್‌ಸಿಯ ಪರೀಕ್ಷೆ ಹತ್ತಿರ ಬರುತ್ತಿದ್ದ ಕಾರಣ ಓದುವಂತೆ ತಾಯಿ ಗದರಿಸಿದ್ದಾರೆ. ಇದರಿಂದ ಕೋಪಗೊಂಡ ಬಾಲಕಿ ವಾಸಿಸುತ್ತಿದ್ದ ಅಪಾರ್ಟ್ಮೆಂಟ್‌ನ 20ನೇ ಮಹಡಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Advertisement
ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಆಸೀಸ್‌ಗೆ ಬಹುದೊಡ್ಡ ಆಘಾತ – ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದ ಸ್ಟಾರ್ಕ್