ಕೋಲಾರ: ಅನುಮಾನಾಸ್ಪದ ರೀತಿಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಅಬ್ಬಣಿ ಗ್ರಾಮದಲ್ಲಿ ನಡೆದಿದೆ.
ಭೂಮಿಕಾ(20) ಆತ್ಮಹತ್ಯೆಗೆ ಶರಣಾದ ಯುವತಿ. ಭೂಮಿಕಾ ಕೋಲಾರ ನಗರದ ಎಸ್‍ಡಿಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದಳು. ಇಂದು ಬೆಳಗ್ಗೆ ಮನೆಯಲ್ಲಿ ಕುಟುಂಬದವರು ಎಲ್ಲರು ಮಲಗಿದ್ದ ವೇಳೆ ಭೂಮಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಳಗ್ಗೆ ಎದ್ದ ಪೋಷಕರು ಭೂಮಿಕಾ ಸ್ಥಿತಿಯನ್ನು ನೋಡಿ ಆಕೆಗೆ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅಷ್ಟರಲ್ಲಿ ಭೂಮಿಕಾ ಮೃತಪಟ್ಟಿದ್ದಾಳೆ. ಭೂಮಿಕಾ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಗೆ ಲೋ ಬಿಪಿ ಇರುವ ಕಾರಣ ಆಕೆ ಮೃತಪಟ್ಟಿದ್ದಾಳೆ ಎಂದು ಪೋಷಕರು ವಾದ ಮಾಡುತ್ತಿದ್ದಾರೆ.
ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv