ಭೋಪಾಲ್: ಕೆಲ ನೆರೆಹೊರೆಯವರ ಕಿರುಕುಳ ತಾಳಲಾರದೆ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬಾಲಕಿಯು ಮಧ್ಯಪ್ರದೇಶದ ಜಬಲ್‍ಪುರ ಜಿಲ್ಲೆಯ ರಾಂಝಿ ಪ್ರದೇಶದ ನಿವಾಸಿಯಾಗಿದ್ದು, ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
Advertisement
ನೆರೆಹೊರೆಯ ಮನೆಯವರು ಬಾಲಕಿಯು ಶಾಲೆಗೆ ಹೋಗುವ ವೇಳೆ ಅವಳ ಚಿತ್ರಗಳನ್ನು ಕ್ಲಿಕ್ಕಿಸಿ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದರು. ಈ ಬಗ್ಗೆ ಬಾಲಕಿಯೂ ಪೊಲೀಸರಿಗೆ ದೂರು ನೀಡಲು ಹೋದರೆ ಪೊಲೀಸರು ಮೂರು ಗಂಟೆಯಾದರೂ ದೂರು ದಾಖಲಿಸಿಕೊಂಡಿರಲಿಲ್ಲ. ಇದರಿಂದ ಮನನೊಂದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Advertisement
ಬಾಲಕಿಯ ಮನೆಯಲ್ಲಿದ್ದ ಡೆತ್ ನೋಟ್‍ನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಆಧಾರದ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆಶಾ ಖನ್ನಾ, ತನ್ವಿ ಕೇವತ್ ಮತ್ತು ಮಮತಾ ಕೇವತ್ ಮತ್ತು ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿತ ವ್ಯಕ್ತಿಗಳು.
Advertisement
ಇದೇ ವೇಳೆ ಮೃತ ಬಾಲಕಿಯ ತಂದೆ ಸುದ್ದಿಗಾರರೊಂದಿಗೆ ಮಾತನಾಡಿ, ಬಾಲಕಿಗೆ ಆರೋಪಿಗಳು ಕಿರುಕುಳ ನೀಡುತ್ತಿದ್ದು, ನನಗೂ ಹೊಡೆದಿದ್ದಾರೆ ಎಂದು ಈ ಹಿಂದೆ ದೂರು ನೀಡಿದ್ದೇನೆ ಎಂದರು. ಇದನ್ನೂ ಓದಿ: ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ – ನಾಳೆ ಮಧ್ಯಾಹ್ನವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಬಾಲಕಿಯೂ ಪೊಲೀಸ್ ಠಾಣೆಗೆ ಹೋಗಿ ದೂರುದಾರರ ವಿರುದ್ಧ ರಾಜಿಯನ್ನು ಮಾಡಿಕೊಳ್ಳಲು ಬಯಸಿದ್ದಳು ಎಂದು ಎಎಸ್ಪಿ ಸಂಜಯ್ ಅಗರವಾಲ್ ತಿಳಿಸಿದ್ದಾರೆ. ಸಂತ್ರಸ್ತೆ ಅಪ್ರಾಪ್ತ ಬಾಲಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಮತ್ತು ಇದು ಆಕೆಯ ತಂದೆ ಮತ್ತು ಹುಡುಗನ ಕುಟುಂಬದ ವಿವಾದಕ್ಕೆ ಕಾರಣವಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು – ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತು