ತುಮಕೂರು: ಚಿರತೆ ಬಾಲ ಹಿಡಿದು ಎಲ್ಲರನ್ನೂ ನಿಬ್ಬೆರಗು ಮಾಡಿದ್ದ ಆನಂದ್ ಅವರಿಗೆ ಆಘಾತ ಎದುರಾಗಿದೆ. ಅವರ 13 ವರ್ಷದ ಪುತ್ರಿ ಸಾವನ್ನಪ್ಪಿದ್ದಾರೆ.
ಆನಂದ್ ಅವರ ಮಗಳು 13 ವರ್ಷದ ಕವನ, ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಘಟನೆ ನಡೆದಿದೆ.
ರಂಗಾಪುರ ಬಳಿಯ ಚಿಕ್ಕಕೊಟ್ಟಿಗೇನಹಳ್ಳಿ ನಿವಾಸಿ ಆನಂದ್. ಕಳೆದ ಒಂದು ವಾರದ ಹಿಂದೆ ಅರಣ್ಯ ಇಲಾಖೆ ಸಿಬ್ಬಂದಿಯಿಂದ ತಪ್ಪಿಸಿಕೊಂಡು ಓಡುತ್ತಿದ್ದ ಚಿರತೆಯ ಬಾಲ ಹಿಡಿದು ಬೋನಿಗೆ ಹಾಕಿದ್ದರು.
ಆನಂದ್ ಚಿರತೆ ಸೆರೆ ಹಿಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆನಂದ್ ಧೈರ್ಯಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಇಂದು ಏಕಾಏಕಿ ಅವರ ಮಗಳಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ತಿಪಟೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಬಾಲಕಿ ಸಾವಿಗೀಡಾಗಿದ್ದಾಳೆ.