ಹಾಸನ: ಬಸ್ (Bus) ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಬಾಲಕಿ (Girl) ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆ, ಅರಸೀಕೆರೆ ತಾಲೂಕಿನ, ಹೊಳಲ್ಕೆರೆ ಗೇಟ್ ಬಳಿ ನಡೆದಿದೆ.
ಭಾರ್ಗವಿ (4) ಮೃತ ಬಾಲಕಿ. ಭಾರ್ಗವಿ ತಾಯಿ ಯಮುನಾ ಜೊತೆ ದೊಡ್ಡಮೇಟಿಕುರ್ಕೆ ಗ್ರಾಮದ ಆಸ್ಪತ್ರೆಗೆ ತೆರಳುತ್ತಿದ್ದರು. ಬಸ್ ಹತ್ತುತ್ತಿದ್ದ ವೇಳೆ ಆಯತಪ್ಪಿ ಬಿದ್ದ ಪರಿಣಾಮ ಸಾರಿಗೆ ಬಸ್ಸಿನ ಚಕ್ರ ಭಾರ್ಗವಿ ಮೇಲೆ ಹರಿದಿದೆ. ಘಟನೆಯ ಪರಿಣಾಮ ಭಾರ್ಗವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಡಿ.16 ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಮುರ್ಮು ಆಗಮನ – ಭದ್ರತಾ ತಂಡದಿಂದ ಹೆಲಿಕಾಪ್ಟರ್ ಮಾಕ್ ಡ್ರಿಲ್!
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಸಿಡ್ನಿಯಲ್ಲಿ ಜನಸಮೂಹದ ಮೇಲೆ ಗುಂಡಿನ ದಾಳಿ; 10 ಮಂದಿ ಬಲಿ

