ಅಹಮದಾಬಾದ್: ಸರ್ಕಾರಿ ಶಾಲೆಯೊಂದರಲ್ಲಿ ಕಬ್ಬಿಣದ ಗೇಟ್ (Iron Gate) ಬಿದ್ದು 8 ವರ್ಷದ ಬಾಲಕಿ ಮೃತಪಟ್ಟ ಘಟನೆ ಗುಜರಾತ್‌ನ (Gujarat) ದಾಹೋದ್ ಜಿಲ್ಲೆಯಲ್ಲಿ ನಡೆದಿದೆ.
ರಾಂಪುರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ (School) ಈ ಘಟನೆ ನಡೆದಿದ್ದು, ಅಶ್ಮಿತಾ ಮೊಹಾನಿಯಾ (8) ಮೃತ ವಿದ್ಯಾರ್ಥಿನಿ (Student). ಈಕೆ ಶಾಲೆಯಲ್ಲಿದ್ದ ಕಬ್ಬಿಣದ ಗೇಟ್‌ನ ಬಳಿ ಆಟವಾಡುತ್ತಿದ್ದಳು. ಈ ವೇಳೆ ಅಶ್ಮಿತಾಳ ಮೇಲೆ ಭಾರವಾದ ಗೇಟ್ ಬಿದ್ದಿದೆ. ಇದರ ಪರಿಣಾಮವಾಗಿ ಬಾಲಕಿಯ ತಲೆಗೆ ಗಂಭೀರ ಗಾಯಗಳಾಗಿದೆ.
Advertisement
Advertisement
ತಕ್ಷಣ ಅಲ್ಲಿದ್ದ ಶಿಕ್ಷಕರು, ಅಶ್ಮಿತಾಳನ್ನು ಪ್ರಾಥಮಿಕ ಚಿಕಿತ್ಸೆಗಾಗಿ ದಾಹೋದ್ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ನಂತರ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕನ ಬಂಗಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
Advertisement
Advertisement
ಘಟನೆಯ ನಂತರ, ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಜೊತೆಗೆ ಈ ಆದೇಶ ತಕ್ಷಣದಿಂದಲೆ ಜಾರಿಗೆ ಬರುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ದಾಹೋದ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಆರಂಭಿಸಲಾಗಿದೆ. ಇದನ್ನೂ ಓದಿ: ಐಷಾರಾಮಿ ಕಾರು ಖರೀದಿ ನೆಪದಲ್ಲಿ ವಂಚಿಸಿದವ ಅರೆಸ್ಟ್- 10 ಕೋಟಿ ಮೌಲ್ಯದ 9 ಕಾರು ಜಪ್ತಿ