ಕೋಲ್ಕತ್ತಾ: ಹುಟ್ಟುಹಬ್ಬದ ಪಾರ್ಟಿಯೊಂದರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ.
ತೃಣಮೂಲ ಕಾಂಗ್ರೆಸ್ ಪಂಚಾಯತ್ ಸದಸ್ಯನ ಮಗ ಬಂಧಿತ ಆರೋಪಿ. ಬಾಲಕಿಯು ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಳ್ಳಲು ಹೋಗಿದ್ದಳು. ಆದರೆ ಅವಳು ಅಸ್ವಸ್ಥವಾಗಿ ಮನೆಗೆ ಮರಳಿದ್ದಾಳೆ. ಇದರಿಂದಾಗಿ ಆತಂಕಗೊಂಡ ಮನೆಯವರು ಆಸ್ಪತ್ರೆಗೆ ಸೇರಿಸಲು ಕರೆದೊಯ್ಯುವ ಮೊದಲೇ ಸಾವನ್ನಪ್ಪಿದ್ದಾಳೆ.
Advertisement
Advertisement
ಈ ಬಗ್ಗೆ ಬಾಲಕಿಯ ಪೋಷಕರು ಮಾತನಾಡಿ ನಮ್ಮ ಮಗಳು ಸ್ಥಳೀಯ ಟಿಎಂಸಿ ನಾಯಕನ ಮಗನ ನಿವಾಸದ ಪಾರ್ಟಿಯಿಂದ ಹಿಂದಿರುಗಿದ ನಂತರ ತೀವ್ರವಾಗಿ ರಕ್ತಸ್ರಾವವಾಗಿತ್ತು ಜೊತೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ನಾವು ಅವಳನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಅವಳು ಸಾವನ್ನಪ್ಪಿದ್ದಳು ಎಂದು ತಿಳಿಸಿದ್ದಾರೆ.
Advertisement
ಈ ಬಗ್ಗೆ ಪಾರ್ಟಿಯಲ್ಲಿ ಹಾಜರಿದ್ದ ಜನರೊಂದಿಗೆ ಮಾತನಾಡಿದ ನಂತರ ಆರೋಪಿ ಮತ್ತು ಅವನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ನಮಗೆ ಖಚಿತವಾಗಿದೆ. ಅಷ್ಟೇ ಅಲ್ಲದೇ ಬಾಲಕಿಯ ಪೋಸ್ಟ್ ಮಾರ್ಟಮ್ ಬರುವ ಮುನ್ನವೇ ಜನರ ಗುಪೊಂದು ಬಲವಂತಾಗಿ ಅಂತ್ಯಸಂಸ್ಕಾರ ಮಾಡಿಸಿದ್ದಾರೆ ಎಂದು ಆರೋಪಿಸಿದರು.
Advertisement
ಘಟನೆ ಸಂಬಂಧಿಸಿ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ಪಂಚಾಯತ್ ಸದಸ್ಯನ ಮಗ ಎಂದು ಬಾಲಕಿಯ ಕುಟುಂಬ ಹೇಳಿಕೊಂಡಿದ್ದು, ಹೆಚ್ಚಿನ ತನಿಖೆಗಾಗಿ ಆತನನ್ನು ಬಂಧಿಸಲಾಗಿದೆ. ಘಟನೆ ನಡೆದ ನಾಲ್ಕು ದಿನಗಳ ನಂತರ 9ನೇ ತರಗತಿಯ ವಿದ್ಯಾರ್ಥಿ ಅಪ್ರಾಪ್ತ ಬಾಲಕಿಯ ಪೋಷಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಆಸ್ತಿಗಾಗಿ ಜಗಳ- ಮಲಗಿದ್ದ ತಮ್ಮನ ಮೇಲೆ ಹಲ್ಲೆ ಮಾಡಿ ಕೊಂದ ಅಣ್ಣ
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಟಿಎಂಸಿಯ ಹಿರಿಯ ನಾಯಕ ಮತ್ತು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಶಶಿ ಪಂಜ ಅವರು, ಘಟನೆಯಲ್ಲಿ ಯಾವುದೇ ರಾಜಕೀಯ ಮಾಡಬಾರದು. ಪೊಲೀಸರು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು. ಘಟನೆಯನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಹಂಸಖಾಲಿಯಲ್ಲಿ 12 ಗಂಟೆಗಳ ಬಂದ್‍ಗೆ ಕರೆ ನೀಡಿದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರ ಸಮರ್ಥರಿದ್ದಾರೆ: ಎಸ್.ಟಿ.ಸೋಮಶೇಖರ್