ರಾತ್ರಿ ಹೊರಗೆ ಹೋಗಿದ್ದ ಯುವತಿ ಮುಂಜಾನೆ ಶವವಾಗಿ ಪತ್ತೆ

Public TV
1 Min Read
KLR DEATH 2

ಕೋಲಾರ: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆಯ ಶವ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಕೋಲಾರ ತಾಲೂಕಿನ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ 20 ವರ್ಷ ವಯಸ್ಸಿನ ಕಾವ್ಯಾ ಮೃತ ಯುವತಿ. ಬುಧವಾರ ರಾತ್ರಿ ಮನೆಯಿಂದ ಹೊರಗೆ ಹೋಗಿದ್ದ ಕಾವ್ಯಾ ಮುಂಜಾನೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈಕೆ ಕೂಲಿ ಕೆಲಸ ಮಾಡಿಕೊಂಡಿದ್ದು, ತರಕಾರಿಗಳನ್ನು ಕೊಯ್ಯುವ ಕೆಲಸ ಮಾಡುತ್ತಿದ್ದಳು.

klr19 suspect death av2 2

ಕಾವ್ಯಾ ರಾತ್ರಿ ಬಹಿರ್ದೆಸೆಗೆ ಹೊರಗೆ ಹೋಗಿದ್ದಳು. ಆದರೆ ಇಂದು ಮುಂಜಾನೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಯಾರೋ ಕಿಡಿಗೇಡಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ನಡೆದ ಸ್ಥಳಕ್ಕೆ ಕೋಲಾರ ಎಸ್‍ಪಿ ರೋಹಿಣಿ ಕಟೋಜ್ ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

vlcsnap 2017 10 19 12h09m13s47

vlcsnap 2017 10 19 12h09m40s247

vlcsnap 2017 10 19 12h11m13s167

vlcsnap 2017 10 19 12h11m27s40

vlcsnap 2017 10 19 13h13m11s249

Share This Article
Leave a Comment

Leave a Reply

Your email address will not be published. Required fields are marked *