ಕಾಸರಗೋಡು: ಕೇರಳದ ಕಾಸರಗೋಡಿನ ಉಪಾಹಾರ ಗೃಹದಲ್ಲಿ ಶವರ್ಮ ತಿಂದು 16 ವರ್ಷದ ಹುಡುಗಿಯೊಬ್ಬಳು ಮೃತಪಟ್ಟಿದ್ದು, 18 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.
Advertisement
ಕಾಸರಗೋಡು ಸಮೀಪದ ಕರಿವಲ್ಲೋರ್ ನಿವಾಸಿ ದೇವಾನಂದ ಕನಂಗಾಡ್ (16) ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದು, ವಿಷಪೂರಿತ ಉಪಾಹಾರ ಸೇವನೆ ಶಂಕೆ ವ್ಯಕ್ತಪಡಿಸಿದ್ದಾರೆ. ಉಪಾಹಾರ ಸೇವಿಸಿದ ಜ್ಯೂಸ್ ಅಂಗಡಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮಳಿಗೆಯನ್ನು ಬಂದ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜಾಗರಣೆ, ಡಿಜೆ ಸದ್ದು ಮಾಡುವಂತಿಲ್ಲ- ರಂಜಾನ್ ಆಚರಣೆಗೆ ಹಲವು ನಿರ್ಬಂಧ
Advertisement
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ವೈದ್ಯಾಧಿಕಾರಿ ಎ.ವಿ.ರಾಮದಾಸ್, ಅಸ್ವಸ್ಥಗೊಂಡ 18 ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ಹೇಳಿದ್ದಾರೆ.
Advertisement
Advertisement
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಸಚಿವ ಎಂ.ವಿ.ಗೋವಿಂದನ್, ರಾಜ್ಯದೆಲ್ಲೆಡೆ ಇರುವ ಹೊಟೇಲ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವಂತೆ ಸರ್ಕಾರ ಖಚಿತಪಡಿಸುತ್ತದೆ. ರೆಸ್ಟೋರೆಂಟ್‌ಗಳಲ್ಲಿ ನೀಡಲಾಗುವ ಆಹಾರವು ಉತ್ತಮ ಗುಣಮಟ್ಟದ್ದಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರವು ರಾಜ್ಯಾದ್ಯಂತ ತಪಾಸಣೆ ನಡೆಸುತ್ತದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಬಿಜೆಪಿ ವಿಶ್ವ ದಾಖಲೆ ಮಾಡುತ್ತಿದೆ: ಕೇಜ್ರಿವಾಲ್ ಟೀಕೆ
ಮೂಲಗಳ ಪ್ರಕಾರ ವಿದ್ಯಾರ್ಥಿಗಳು ಟ್ಯೂಷನ್‌ಗೆ ಹೋಗಿದ್ದಾಗ ಉಪಾಹಾರ ಸೇವಿಸಿದ್ದಾರೆ. ಜ್ಯೂಸ್ ಅಂಗಡಿಯು ಟ್ಯೂಷನ್ ಕೇಂದ್ರದ ಪಕ್ಕದಲ್ಲೇ ಇದೆ ಎಂದು ಹೇಳಲಾಗಿದೆ.