ವಿಜಯಪುರ: ಅವಿವಾಹಿತೆಯೊಬ್ಬಳ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಹಳ್ಳೂರ ಗ್ರಾಮದಲ್ಲಿ ಘಟನೆ ನಡೆದಿದೆ. ಯುವತಿಯನ್ನು ಮಂಜುಳಾ ಚನ್ನಪ್ಪಗೌಡ ಪಾಟೀಲ್ (22) ಎಂದು ಗುರುತಿಸಲಾಗಿದೆ.
Advertisement
Advertisement
ಶವ ಪತ್ತೆಯಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಬಿಸಿಯೂಟದಲ್ಲಿ ಹಲ್ಲಿ ಪತ್ತೆ – ವಿದ್ಯಾರ್ಥಿಗಳು ಅಸ್ವಸ್ಥ
Advertisement
ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Advertisement
Web Stories