ಮೈಸೂರು: ಜಿಲ್ಲೆಯ ನಂಜನಗೂಡಿನಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿರುವ ಅನುಮಾನ ಸೃಷ್ಟಿಯಾಗಿದೆ. ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.
ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದ ಯುವತಿ ಸವಿತಾ(25) ಮೃತ ಯುವತಿ. ಸವಿತಾ ಕಾಳನಾಯಕ ಮತ್ತು ನಾಗಮ್ಮ ಎಂಬವರ ಪುತ್ರಿ ಆಗಿದ್ದು, ಕೂಗಲೂರು ಮತ್ತು ಕಸುವಿನಹಳ್ಳಿ ಮುಖ್ಯರಸ್ತೆಯ ಜಮೀನಿನಲ್ಲಿ ಆಕೆಯ ಮೃತ ದೇಹ ಪತ್ತೆಯಾಗಿದೆ.
ಬೆಂಗಳೂರಿನಲ್ಲಿ ನರ್ಸಿಂಗ್ ತರಬೇತಿ ಮುಗಿಸಿ ಒಂದು ತಿಂಗಳ ಹಿಂದೆ ಗ್ರಾಮಕ್ಕೆ ಬಂದಿದ್ದ ಸವಿತಾ, ಕೂಗಲೂರು ಗ್ರಾಮದ ಗೌರಮ್ಮ ಅವರ ಪುತ್ರ ಶಂಕರ್ ಅವರನ್ನು ಪ್ರೀತಿಸುತ್ತಿದ್ದಳು. ಅನ್ಯ ಜಾತಿಯ ಯುವಕನನ್ನು ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv