ನನ್ನಿಂದ ಯಾರು ಕಷ್ಟ ಪಡಬಾರದೆಂದು ಡೆತ್‍ನೋಟ್ ಬರೆದು ಯುವತಿ ಆತ್ಮಹತ್ಯೆ

Public TV
1 Min Read
mdk suicide

ಮಡಿಕೇರಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಳ್ಳೇಕೆರೆಯಲ್ಲಿ ನಡೆದಿದೆ.

ರಂಜಿತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಿದ್ದಾಪುರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ರಂಜಿತಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಅಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ರಂಜಿತಾ ಡೆತ್‍ನೋಟ್ ಬರೆದಿದ್ದಾಳೆ.

Police Jeep 1 1

ಡೆತ್‍ನೋಟ್‍ನಲ್ಲಿ ಏನಿದೆ?
ನನ್ನ ಸಾವಿಗೆ ಯಾರು ಕಾರಣ ಅಲ್ಲ. ನನ್ನ ಕುಟುಂಬದಲ್ಲಿ ನಡೆಯುವುದನ್ನು ನೋಡಿಯೇ ನಾನು ಈ ತೀರ್ಮಾನಕ್ಕೆ ಬಂದಿದ್ದೇನೆ. ನಾನು ಎಲ್ಲರಿಗೂ ಕಷ್ಟವನ್ನು ಕೊಡುತ್ತಿದ್ದೇನೆ. ನನ್ನಿಂದ ಯಾರು ಕಷ್ಟ ಪಡಬಾರದು. ಅಪ್ಪ ಅಮ್ಮ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ, ನನ್ನ ಎಲ್ಲಾ ಸ್ನೇಹಿತರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ರಂಜಿತಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article