ಮಡಿಕೇರಿ: ಇನ್ನೋವಾಕ್ಕೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಗಾಯಗೊಂಡಿರುವ ಘಟನೆ ನಡೆದಿದೆ.
ಶೈಲಜಾ ಅಪಘಾತದಲ್ಲಿ ಗಾಯಗೊಂಡ ಯುವತಿ. ಶೈಲಜಾ ಕುಶಾಲನಗರ ಸಮೀಪದ ಕೂಡುಮಂಗಳೂರು ನವಗ್ರಾಮದ ಅಕ್ಕಿಮಂಟಿ ಎಂಬಲ್ಲಿನ ಚಂದ್ರ ಎಂಬವರ ಪುತ್ರಿಯಾಗಿದ್ದು, ಕೊಪ್ಪದ ಹಾರ್ಡ್ ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಶೈಲಜಾ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಮನೆಯಲ್ಲಿ ತುರ್ತು ಕೆಲಸವಿದೆ ಎಂದು ಹೇಳಿ ಎಂದಿಗಿಂತ ಬೇಗ ಮನೆ ಕಡೆಗೆ ಕೆ.ಎ. 12 ಕ್ಯೂ 2358 ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾರೆ. ಮಧ್ಯಾಹ್ನ 3.20ಕ್ಕೆ ಮಾರ್ಗಮಧ್ಯದಲ್ಲಿ ಕುಶಾಲನಗರ ನಕ್ಷತ್ರ ಹೊಟೇಲ್ ಮುಂಭಾಗದಲ್ಲಿ ಇನ್ನೋವಾ ಕಾರೊಂದು ಎದುರಾಗಿದೆ.
ತನಗಿಂತ ಮುಂದಿದ್ದ ವಾಹನವೊಂದನ್ನು ಹಿಂದಿಕ್ಕುವ ಭರಾಟೆಯಲ್ಲಿ ಶೈಲಜಾ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಇನ್ನೋವಾದ ಮುಂಭಾಗಕ್ಕೆ ಅಪ್ಪಳಿಸಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಶೈಲಜಾರವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv