Advertisements

ಶಾಕಿಂಗ್ ವಿಡಿಯೋ: ರಸ್ತೆಯಲ್ಲಿ ಹೋಗ್ತಿದ್ದ ವಿದ್ಯಾರ್ಥಿನಿಗೆ ಹಾಡಹಗಲೇ ಯುವಕರಿಂದ ಲೈಂಗಿಕ ಕಿರುಕುಳ

ಭುವನೇಶ್ವರ್: ಕಾಲೇಜು ವಿದ್ಯಾರ್ಥಿನಿಗೆ ಯುವಕರ ತಂಡ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಒಡಿಶಾದ ಬಾರ್‍ಘರ್ ಜಿಲ್ಲೆಯಲ್ಲಿ ನಡೆದಿದೆ. ಇದರ ವಿಡಿಯೋ ವೈರಲ್ ಆದ ನಂತರ ಪೊಲೀಸರು ಎಚ್ಚೆತ್ತುಕೊಂಡಿದ್ದು, 6 ಜನರನ್ನ ಬಂಧಿಸಿದ್ದಾರೆ.

Advertisements

ಬಟ್ಟೆಯಿಂದ ಮುಖ ಮುಚಿಕೊಂಡಿದ್ದ ಆರೋಪಿಗಳು ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಯುವತಿಯ ಜೊತೆಗಿದ್ದ ಮತ್ತೊಬ್ಬ ಯುವಕನನ್ನ ಥಳಿಸಿದ್ದಾರೆ. ಯುವತಿ ಸಾಕಷ್ಟು ಬಾರಿ ಮನವಿ ಮಾಡಿದ್ರೂ ಯುವಕರು ಕಿವಿಗೊಡದೆ ಆಕೆಯ ಮೇಲೆ ದೌರ್ಜನ್ಯವೆಸಗಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರೊಬ್ಬರು ಇದನ್ನ ಮೊಬೈಲ್‍ನಲ್ಲಿ ಸರೆಹಿಡಿದಿದ್ದಾರೆ.

Advertisements

ಘಟನೆಗೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳು ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಗುಂಪಿನಲ್ಲಿದ್ದ ಇತರರ ಬಂಧನಕ್ಕಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ಪದ್ಮಪುರ್‍ನ ಪೊಲೀಸ್ ಅಧಿಕಾರಿ ಲಕ್ಷ್ಮೀನಾರಾಯಣ್ ಪಾಂಡಾ ಹೇಳಿದ್ದಾರೆ.

Advertisements

ಆರೋಪಿಗಳ ವಿರುದ್ಧ ಐಟಿ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ. ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಒಡಿಶಾದ ಡಿಜಿಪಿ ರಾಕೇಂದ್ರ ಪ್ರಸಾದ್ ಶರ್ಮಾ ತಿಳಿಸಿದ್ದಾರೆ.

 

Advertisements
Exit mobile version