ಹುಬ್ಬಳ್ಳಿ/ಧಾರವಾಡ: 5 ವರ್ಷದ ಬಾಲಕಿ ಮೇಲೆ ಆತ್ಯಾಚಾರಕ್ಕೆ ಯತ್ನಿಸಿ, ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಕಟ್ಟಿನಿಟ್ಟಿನ ಕ್ರಮ ಆಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಪ್ರತಿಕ್ರಿಯಿಸಿದ್ದಾರೆ.
ಧಾರವಾಡದಲ್ಲಿ (Dharwad) ಮಾತನಾಡಿದ ಅವರು, ಈ ಘಟನೆ ಈಗಷ್ಟೇ ನನ್ನ ಗಮನಕ್ಕೆ ಬಂದಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಲ್ಲಿ ನಾನು ರಾಜಕೀಯ ಮಾತನಾಡುವುದಿಲ್ಲ. ಆದರೆ, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಆಗಬೇಕು. ಎಲ್ಲ ರೀತಿಯ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಬೇಕು. ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.ಇದನ್ನೂ ಓದಿ: ನನ್ನ ಮೇಲಿನ ಗುತ್ತಿಗೆದಾರರ ಎರಡೂ ಆರೋಪಗಳು ನಿರಾಧಾರ – ರವಿ ಬೋಸರಾಜು
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಿಹಾರ್ ಮೂಲದ ಸೈಕೋಪಾತ್ ಈ ಕೃತ್ಯ ಎಸಗಿದ್ದಾನೆ. ಘಟನೆಯನ್ನು ತೀವ್ರವಾಗಿ ಖಂಡಿಸಿದ ಸ್ಥಳೀಯರು ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ಹೊರಹಾಕಿದರು.
ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಯಾವ ಒತ್ತಡಕ್ಕೂ ಮಣಿಯದೆ ಜಾತಿಗಣತಿ ಜಾರಿ ಮಾಡಬೇಕು: ಪ್ರಣವಾನಂದ ಸ್ವಾಮೀಜಿ