ಕಲಬುರಗಿ: ಮಿರ್ಚಿ ಭಜಿ ಕೊಡುವ ನೆಪದಲ್ಲಿ 13 ವರ್ಷದ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು 70 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಘಟನೆ ಅಫಜಲಪುರ ತಾಲೂಕಿನ ರೇವೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನವೆಂಬರ್ 29 ರಂದು ಅತ್ಯಾಚಾರ ನಡೆದಿದೆ ಎನ್ನಲಾಗಿದ್ದು, ನಿನ್ನೆ ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಬಾಲಕಿಯನ್ನು ಅಫಜಲಪುರ ತಾಲೂಕಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್
ಮಿರ್ಚಿ ಭಜಿ ಕೊಡಿಸುವುದಾಗಿ ಬಾಲಕಿಯನ್ನು ಯಮಾರಿಸಿ ಕೃತ್ಯ ಎಸಗಲಾಗಿದೆ ಎಂದು ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಸದ್ಯ ಈ ಕುರಿತು ರೇವೂರ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆಭರಣ ತಯಾರಿಕಾ ಕಂಪನಿಯ ಮೇಲೆ ಐಟಿ ದಾಳಿ-500 ಕೋಟಿ ಕಪ್ಪು ಹಣ ವಶ