Thursday, 21st November 2019

ಸ್ನೇಹಿತರಿಂದ ಬರ್ತ್ ಡೇ ಪಾರ್ಟಿ- ಪ್ರಿಯಕರನಿಂದ್ಲೇ ಅತ್ಯಾಚಾರ!

ಮುಂಬೈ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿಯನ್ನು ಆಕೆಯ ಪ್ರಿಯಕರನೇ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ನಡೆದಿದೆ.

ಈ ಘಟನೆಯು ಪಾಲ್ಘಾರ್ ಜಿಲ್ಲೆಯ ವಾಲಿವ್‍ನಲ್ಲಿ ನಡೆದಿದೆ. ಸಂತ್ರಸ್ತೆಯ ಬರ್ತ್ ಡೇ ಪಾರ್ಟಿಯನ್ನು ಆಕೆಯ ಸ್ನೇಹಿತರು ಆಯೋಜನೆ ಮಾಡಿದ್ದರು. ಈ ಪಾರ್ಟಿಗೆ ಸ್ನೇಹಿತರ ಗೆಳೆಯರು ಕೂಡ ಬಂದಿದ್ದರು. ಆದರೆ ಈ ಪಾರ್ಟಿಯಲ್ಲಿ ಆಕೆಯ ಪ್ರಿಯಕರನೇ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಪ್ರಕರಣ?
ಫೆಬ್ರವರಿ 13 ರಂದು ಸಂತ್ರಸ್ತೆಯ ಸ್ನೇಹಿತರು ಹುಟ್ಟುಹಬ್ಬದ ಪಾರ್ಟಿಯನ್ನು ಆಯೋಜನೆ ಮಾಡಿದ್ದರು. ಈ ಪಾರ್ಟಿಗೆ ಸ್ನೇಹಿತರು, ಅವರ ಗೆಳೆಯರು ಮತ್ತು ಪ್ರಿಯಕರನೂ ಬಂದಿದ್ದನು. ಆದರೆ ಪಾರ್ಟಿಯನ್ನು ಆಯೋಜನೆ ಮಾಡಿದ್ದ ಸ್ನೇಹಿತರು ಬರ್ತ್ ಡೇ ಹುಡುಗಿ ಕುಡಿಯುವ ತಂಪು ಪಾನೀಯದಲ್ಲಿ ಮತ್ತು ಬರುವ ವಸ್ತುವನ್ನು ಬೆರೆಸಿ ಕುಡಿಸಿದ್ದಾರೆ. ಸಂತ್ರಸ್ತೆ ಜ್ಯೂಸ್ ಕುಡಿದ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದಾಳೆ. ನಂತರ ಆಕೆಯ ಪ್ರಿಯಕರ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ಮೇಲೆ ಹಲ್ಲೆ ಮಾಡಿ ಈ ಘಟನೆಯ ಬಗ್ಗೆ ಯಾರಿಗೂ ಹೇಳಬಾರದು ಎಂದು ಸ್ನೇಹಿತರು ಬೆದರಿಕೆ ಹಾಕಿದ್ದಾರೆ. ಸಂತ್ರಸ್ತೆ ಈ ಕುರಿತು ವಾಲಿವ್ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತೆ ಕಂಡಿವಾಲಿ ನಿವಾಸಿಯಾಗಿದ್ದು, ಮುಂಬೈ ಉತ್ತರ ಭಾಗದಲ್ಲಿ ನೆಲೆಸಿದ್ದರು. ತನ್ನ ಹುಟ್ಟುಹಬ್ಬದ ಸಂತೋಷಕೂಟದಲ್ಲಿ ಗೆಳೆಯನೇ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆದ್ದರಿಂದ ಸಂತ್ರಸ್ತೆ ದೂರು ಸಲ್ಲಿಸಿದ ಬಳಿಕ ಪೊಲೀಸರು ಸ್ನೇಹಿತರು ಮತ್ತು ಆಕೆಯ ಪ್ರಿಯಕರನ ವಿರುದ್ಧ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣವನ್ನು ದಾಖಲಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *