ಮುಂಬೈ: ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಹದಿಹರೆಯದ ಸಹೋದರ ಮತ್ತು ಆಕೆಯ ತಂದೆಯಿಂದಲೇ ಕೆಲವು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ನಡೆದಿದೆ.
ಹುಡುಗಿಯ ಅಜ್ಜ ಹಾಗೂ ದೂರದ ಸಂಬಂಧಿ ಸಹ ಲೈಂಗಿಕ ಕಿರುಕುಳ ನೀಡಿದ್ದಾರೆ. ಹುಡುಗಿ ಶಾಲೆಯಲ್ಲಿ ನಡೆದ `ಗುಡ್ ಟಚ್ ಮತ್ತು ಬ್ಯಾಡ್ ಟಚ್’ ಅಧಿವೇಶನದಲ್ಲಿ ಘಟನೆ ಬೆಳಕಿಗೆ ಬಂದಿದೆ. ನಂತರ ಹುಡುಗಿಯಿಂದ ಹೇಳಿಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 3 ಮಿಲಿಯನ್ ಬ್ಯಾರಲ್ ಕಚ್ಚಾ ತೈಲ ಆಮದಿಗೆ ರಷ್ಯಾದೊಂದಿಗೆ ಭಾರತ ಒಪ್ಪಂದ
ಅತ್ಯಾಚಾರ ಮತ್ತು ಕಿರುಕುಳಕ್ಕಾಗಿ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಹುಡುಗಿಯ 11 ವರ್ಷದ ಸಹೋದರ ಮತ್ತು 45 ವರ್ಷದ ತಂದೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 354 ಅಡಿಯಲ್ಲಿ ಆಕೆಯ ಅಜ್ಜ (60) ವಿರುದ್ಧ ಹಾಗೂ ಚಿಕ್ಕಪ್ಪನ (25) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
2017ರಲ್ಲಿ ಹುಡುಗಿ ಮತ್ತು ಆಕೆಯ ಕುಟುಂಬಸ್ಥರು ಬಿಹಾರದಲ್ಲಿ ನೆಲೆಸಿದ್ದಾಗ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹುಡುಗಿಯ ಹಿರಿಯ ಸಹೋದರ 2020ರ ನವಂಬರ್ ತಿಂಗಳಿನಿಂದ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಮುಂದಾಗಿದ್ದಾನೆ. ಅಜ್ಜ ಮತ್ತು ಚಿಕ್ಕಪ್ಪ ಕೂಡ ಆಕೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು. ಜೊತೆಗೆ ಲೈಂಗಿಕ ಕಿರುಕುಳವನ್ನೂ ನೀಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ
ಕೆಲ ವರ್ಷಗಳಿಂದಲೂ ಆಕೆಗೆ ಕಿರುಕುಳ ನೀಡಲಾಗುತ್ತಿದೆ ಎನ್ನುವುದು ಇಲ್ಲಿ ಗೊತ್ತಾಗಿದೆ. ಎಲ್ಲಾ ಘಟನೆಗಳು ಪ್ರತ್ಯೇಕವಾಗಿ ನಡೆದಿರುವುದರಿಂದ ಆರೋಪಿಗಳು ಪರಸ್ಪರ ಕೃತ್ಯಗಳ ಬಗ್ಗೆ ತಿಳಿದಿರಬಹುದು ಎಂದು ಪುಣೆ ಪೊಲೀಸ್ ಅಧಿಕಾರಿ ಅಶ್ವಿನಿ ಸತ್ಪುಟೆ ಹೇಳಿದ್ದಾರೆ.