CrimeLatestMain PostNational

ಅಪ್ರಾಪ್ತೆ ಮೇಲೆ ತಂದೆ, ಅಣ್ಣನಿಂದ ಅತ್ಯಾಚಾರ – ಅಜ್ಜ, ಚಿಕ್ಕಪ್ಪನಿಂದ ಕಿರುಕುಳ

ಮುಂಬೈ: ಅಣ್ಣ, ತಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಆಕೆಯ ಅಜ್ಜ ಹಾಗೂ ಚಿಕ್ಕಪ್ಪ ಕಳೆದ 5 ವರ್ಷಗಳಿಂದ ಕಿರುಕುಳ ನೀಡಿದ ಘಟನೆ ಪುಣೆದಲ್ಲಿ ನಡೆದಿದೆ.

11 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಸಹೋದರ, ಸಂತ್ರಸ್ತೆಯ ತಂದೆ (45) ಪ್ರತ್ಯೇಕವಾಗಿ ಅತ್ಯಾಚಾರವೆಸಗಿದ್ದಾರೆ. ಇದರ ಜೊತೆಗೆ ಆಕೆಯ ಅಜ್ಜ(60) ಹಾಗೂ ಚಿಕ್ಕಪ್ಪ (25) ಕಳೆದ 5 ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರು ಮೂಲತಃ ಬಿಹಾರದವರಾಗಿದ್ದು, ಸದ್ಯ ಪುಣೆಯಲ್ಲಿ ವಾಸಿಸುತ್ತಿದ್ದಾರೆ.

STOP RAPE

ಈ ಬಗ್ಗೆ ಪೊಲೀಸ್ ಇನ್ಸ್‍ಪೆಕ್ಟರ್ ಅಶ್ವಿನಿ ಸತ್ಪುಟೆ ಮಾತನಾಡಿ, ಬಾಲಕಿಯು ತನ್ನ ಶಾಲೆಯಲ್ಲಿ ಗುಡ್ ಟಚ್ ಹಾಗೂ ಬ್ಯಾಡ್ ಟಚ್ ಚರ್ಚೆಯಲ್ಲಿ ಮಾತನಾಡುವಾಗ ಈ ಘಟನೆ ಬೆಳಕಿಗೆ ಬಂದಿದೆ. ಕಳೆದ 5 ವರ್ಷಗಳಿಂದ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರ ಹಾಗೂ ಕಿರುಕುಳ ನಡೆಯುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಾರು ಪಲ್ಟಿ – ಪ್ರಾಣಾಪಾಯದಿಂದ ಟಿಬಿ ಜಯಚಂದ್ರ ಪಾರು

POLICE JEEP

ಎಲ್ಲಾ ಘಟನೆಗಳು ಪ್ರತ್ಯೇಕವಾಗಿ ಸಂಭವಿಸಿರುವುದರಿಂದ ಮತ್ತು ಆರೋಪಿಗಳು ಪರಸ್ಪರರ ಕೃತ್ಯಗಳ ಬಗ್ಗೆ ತಿಳಿದಿರದ ಕಾರಣ, ಇದು ಸಾಮೂಹಿಕ ಅತ್ಯಾಚಾರದ ಪ್ರಕರಣವಲ್ಲ ಎಂದು ಹೇಳಿದರು. ಸದ್ಯ ಪುಣೆ ನಗರದ ಬಂಡ್‍ಗಾರ್ಡನ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆದರೆ ಈವರೆಗೂ ಯಾರನ್ನು ಬಂಧಿಸಿಲ್ಲ. ಇದನ್ನೂ ಓದಿ: ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

Leave a Reply

Your email address will not be published.

Back to top button