ನವದೆಹಲಿ: ಅಪ್ಪ ತಂದಿರುವ ಸ್ಕೂಟಿ ನೋಡಿ ಖುಷಿಪಟ್ಟಿರುವ ಮಗಳು ನಂಬರ್ ಪ್ಲೇಟ್ ನೋಡಿ ಬೆಚ್ಚಿ ಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಮಗಳಿಗೆ ಸಹಾಯವಾಗುತ್ತದೆ ಎಂದು ತಂದೆ ಸ್ಕೂಟಿಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಆದರೆ ಈ ಸ್ಕೂಟಿಯ ನಂಬರ್ ಪ್ಲೇಟ್ನಿಂದ ಪ್ರತಿದಿನ ಕಿರಿಕಿರಿ ಉಂಟಾಗುತ್ತದೆ ಎಂದು ಯುವತಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕೋವಿಡ್ ವಾರಿಯರ್ಸ್ಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ: ಸಿಎಂ
ದೆಹಲಿಯಲ್ಲಿ ದ್ವಿಚಕ್ರ ವಾಹನಗಳಿಗೆ ‘ಎಸ್’ ಆಂಗ್ಲ ಅಕ್ಷರವನ್ನು ಸೂಚಕವಾಗಿ ನೀಡಲಾಗುತ್ತದೆ. ರಾಜ್ಯದ ಸೂಚಕವಾಗಿ ಡಿಎಲ್ ಅಕ್ಷರದ ಜೊತೆಗೆ ಜಿಲ್ಲೆಯನ್ನು ಪ್ರತಿನಿಧಿಸುವ ಸಂಖ್ಯೆ ನೀಡಲಾಗುತ್ತದೆ. ನಂತರ ವಾಹನ ಸೂಚಕವಾಗಿ ಕಾರಿಗೆ ಸಿ(C) ಬೈಕಿಗೆ ಎಸ್(S) ಎಂದು ನೀಡಲಾಗುತ್ತದೆ. ದೆಹಲಿಯಲ್ಲಿ ಈಗ ಇಎಕ್ಸ್(EX) ಸೀರಿಸ್ ನಡೆಯುತ್ತಿದೆ. ಹೀಗಾಗಿ ಕೆಲವು ದ್ವಿಚಕ್ರ ವಾಹನಗಳಿಗೆ ಎಸ್ಇಎಕ್ಸ್(SEX) ಎಂದು ನಂಬರ್ ನೀಡಲಾಗುತ್ತದೆ. ಇದನ್ನೂ ಓದಿ: ಚೀನಾ ಮೇಲೆ ಕಣ್ಣಿಡಲು ಬಂತು ಇಸ್ರೇಲ್ ಡ್ರೋನ್
ಹೀಗಾಗಿ ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ದ್ವಿಚಕ್ರ ವಾಹನಗಳ ನಂಬರ್ ಪ್ಲೇಟ್ಗಳಲ್ಲಿ’ಎಸ್’ ಅಕ್ಷರದ ನಂತರ ‘ಇಎಕ್ಸ್’ ಅಕ್ಷರವಿದೆ. (EX) ಅಂತಹ ಒಂದು ನಂಬರ್ ಪ್ಲೇಟ್ ಪಡೆದಿರುವ ವಾಹಾನ ಸವಾರರು ಮುಜುಗರಕ್ಕೆ ಒಳಗಾಗುತ್ತಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಹಾಗೂ ಡೆಲ್ಟಾ ವೈರಸ್ ನಡುವಿನ ವ್ಯತ್ಯಾಸವೇನು?
ಸ್ಕೂಟಿ ನಂಬರ್ ಪ್ಲೇಟ್ನಿಂದಾಗಿ ಜನರು ಪದೇ ಪದೇ ಗೇಲಿ ಮಾಡಲು ಆರಂಭಿಸಿದ್ದರು. ಇದರಿಂದ ಸ್ಕೂಟಿ ತೆಗೆದುಕೊಂಡು ಮನೆಯಿಂದ ಹೊರಬರುವುದು ಕಷ್ಟವಾಗಿತ್ತು. ನನ್ನ ಪೋಷಕರು ಸ್ಕೂಟಿ ಸಂಖ್ಯೆಯನ್ನು ಬದಲಾಯಿಸಲು ಪ್ರಯತ್ನಿಸಿದರು. ಆದರೆ ವಾಹನಕ್ಕೆ ಒಮ್ಮೆ ನಿಗದಿಪಡಿಸಿದ ಸಂಖ್ಯೆಯಲ್ಲಿ ಬದಲಾವಣೆಯನ್ನು ಮಾಡಲು ಅನುಮತಿ ಇಲ್ಲ ಎಂದು ತಿಳಿಯಿತ್ತು. ಹೀಗಾಗಿ ನಂಬರ್ ಬದಲಾಯಿಸಲು ಸಾಧ್ಯವಾಗಲಿಲ್ಲ ಎಂದು ಯುವತಿಯೊಬ್ಬಳು ಸ್ಕೂಟಿ ನಂಬರ್ ಪ್ಲೇಟ್ನಿಂದ ತಾನು ಅನುಭವಿಸಿರುವ ಮುಜುಗರದ ಸಂಗತಿಯನ್ನು ಹೇಳಿಕೊಂಡಿದ್ದಾರೆ.