ಮುಂಬೈ: ಯುವತಿಯೊಬ್ಬಳು ಸ್ನೇಹಿತೆಯಾದ ಮಾತ್ರಕ್ಕೆ ಆಕೆಯೊಂದಿಗೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.
ಮದುವೆಯಾಗುವ ನೆಪದಲ್ಲಿ ಯುವತಿ ಗರ್ಭ ಧರಿಸುವಂತೆ ಮಾಡಿ ಬಂಧನಕ್ಕೆ ಒಳಗಾಗಿರುವ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋಟ್ ತಿರಸ್ಕರಿಸಿದೆ. ಇದನ್ನೂ ಓದಿ: IND Vs SA T20 – ರದ್ದಾದ ಪಂದ್ಯದ ಶೇ.50 ರಷ್ಟು ಟಿಕೆಟ್ ಹಣ ಜುಲೈ 1ರಿಂದ ವಾಪಸ್
Advertisement
Advertisement
ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಮುಂಬೈ ನಗರದ ನಿವಾಸಿ ಆಶಿಷ್ ಚಾಕೋರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರಿದ್ದ ಏಕಸದಸ್ಯ ಪೀಠವು ಜಾಮೀನು ನೀಡಲು ನಿರಾಕರಿಸಿದೆ.
Advertisement
Advertisement
ಸ್ನೇಹದಿಂದ ಇರುವುದನ್ನೇ ನೆಪವಾಗಿಟ್ಟುಕೊಂಡು ಲೈಂಗಿಕ ಸಂಬಂಧಕ್ಕೆ ಆಕೆಯ ಒಪ್ಪಿಗೆ ಇದೆ ಎಂದು ತಾನೆ ಅಂದುಕೊಳ್ಳುವಂತಿಲ್ಲ. ಹೀಗಾಗಿ ಆರೋಪಿಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಬೇಕು ಎಂದು ಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಎರಡೇ ದಿನ: ಯಾತ್ರಾರ್ಥಿಗಳಿಗೆ ಆಧಾರ್, ಸರ್ಕಾರಿ ಗುರುತಿನ ಚೀಟಿ ಕಡ್ಡಾಯ
ಈ ಬಗ್ಗೆ ಹೇಳಿಕೆ ನೀಡಿರುವ ಸಂತ್ರಸ್ತೆ, ಚಾಕೋರ್ ಜೊತೆ ಸ್ನೇಹದಿಂದ ಇದ್ದೆ, ನಂತರದ ದಿನಗಳಲ್ಲಿ ಆತ ನನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ್ದಾನೆ. ನಾನು ಗರ್ಭಿಣಿ ಆಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಆರೋಪದಿಂದ ಮುಕ್ತಗೊಳ್ಳಲು ಆತ ನನಗೂ ಸಹ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆ ಇದೆ ಎಂದು ಹೇಳಿರುವುದಾಗಿ ಹೇಳಿಕೆ ನೀಡಿದ್ದಾಳೆ.