– ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ
ಶಿವಮೊಗ್ಗ: ಖಾಸಗಿ ವಸತಿ ಶಾಲೆಯಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣ ಸಾಗರದಲ್ಲಿ (Sagar) ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಸೊರಬ ತಾಲೂಕಿನ ಶಿವಪುರ ಗ್ರಾಮದ ತೇಜಸ್ವಿನಿ (13) ಎಂದು ಗುರುತಿಸಲಾಗಿದೆ. ಈಕೆ ಸಾಗರದ ವನಶ್ರೀ ವಸತಿ ಶಾಲೆಗೆ (Residential School) ಕಳೆದ ಐದು ದಿನಗಳ ಹಿಂದೆ ದಾಖಲಾಗಿದ್ದಳು. ಗುರುವಾರ ಪ್ರಜ್ಞಾ ಹೀನಾ ಸ್ಥಿತಿಯಲ್ಲಿದ್ದ ತೇಜಸ್ವಿಯನ್ನು ಶಾಲೆಯ ಶಿಕ್ಷಕರು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ
ಇದೀಗ ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ (Shivamogga) ಮೆಗ್ಗಾನ್ ಆಸ್ಪತ್ರೆಯಲ್ಲಿ (McGann Hospital) ಮರಣೋತ್ತರ ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಲ್ಲದೇ ವಿದ್ಯಾರ್ಥಿನಿ ಸಾವಿನ ಬಗ್ಗೆ ತನಿಖೆ ನಡೆಸುವಂತೆ ವಿದ್ಯಾರ್ಥಿನಿ ಕುಟುಂಬಸ್ಥರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಇದನ್ನೂ ಓದಿ: 32 ವರ್ಷದ ಗೆಳತಿಯನ್ನು ಕೊಂದು ಪೀಸ್ ಪೀಸ್ ಮಾಡಿದ 56 ವರ್ಷದ ವ್ಯಕ್ತಿ ಅರೆಸ್ಟ್