ಕಾಬೂಲ್: ಕಳೆದ ವರ್ಷ ಅಫ್ಘಾನಿಸ್ತಾನವನ್ನು (Afghanistan) ವಶಪಡಿಸಿಕೊಂಡ ತಾಲಿಬಾನ್ (Taliban) 1 ವರ್ಷಕ್ಕಿಂತಲೂ ಹೆಚ್ಚು ಕಾಲ ಹೆಣ್ಣುಮಕ್ಕಳಿಗೆ (Girls) ಪ್ರೌಢಶಾಲೆಗೆ (High School) ಹೋಗಲು ನಿರ್ಬಂಧಿಸಿದ್ದು, ಇದೀಗ ಈ ವಾರ ನಡೆಯಲಿರುವ ಪ್ರೌಢಶಾಲಾ ಪರೀಕ್ಷೆಯನ್ನು (Exam) ಬರೆಯಲು ಹೆಣ್ಣುಮಕ್ಕಳಿಗೂ ಅನುಮತಿ ನೀಡಿದೆ.
ಅಫ್ಘಾನಿಸ್ತಾನದ 34 ಪ್ರಾಂತ್ಯಗಳ ಪೈಕಿ 31 ಪ್ರಾಂತ್ಯಗಳಿಗೆ ತಾಲಿಬಾನ್‌ನ ನಿರ್ಧಾರ ಅನ್ವಯಿಸುತ್ತದೆ. ಪ್ರೌಢಶಾಲಾ ಪರೀಕ್ಷೆ ಬುಧವಾರದಿಂದ ಪ್ರಾರಂಭವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ವಿದ್ಯಾರ್ಥಿನಿಯರು ಕೂಡಾ ಬರೆಯಲು ಅನುಮತಿಸಲಾಗುವುದು ಎಂದು ಕಾಬೂಲ್ ಶಿಕ್ಷಣ ಇಲಾಖೆಯ ಮುಖ್ಯಸ್ಥ ಎಹ್ಸಾನುಲ್ಲಾ ಕಿತಾಬ್ ತಿಳಿಸಿದ್ದಾರೆ.
ವರದಿಗಳ ಪ್ರಕಾರ ಬುಧವಾರ ನಡೆಯಲಿರುವ ಪರೀಕ್ಷೆಗೆ ಡ್ರೆಸ್ ಕೋಡ್ ನೀಡಲಾಗಿದೆ. ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರು ಕಡ್ಡಾಯವಾಗಿ ಹಿಜಬ್ ಅಥವಾ ಸ್ಕಾರ್ಫ್ ಅನ್ನು ಧರಿಸಬೇಕು. ಪರೀಕ್ಷೆಯಲ್ಲಿ ಸೆಲ್‌ಫೋನ್ ಬಳಕೆ ನಿಷೇಧಿಸಲಾಗಿದೆ. ಬುಧವಾರ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿನಿಯರಿಗೆ ಚಳಿಗಾಲದ ರಜೆಯ ಬಳಿಕ ಮಾರ್ಚ್ ಮಧ್ಯದ ವೇಳೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ಮೆಜೆಸ್ಟಿಕ್ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ
ತಾಲಿಬಾನ್ ಕಳೆದ ವರ್ಷ ಆಗಸ್ಟ್ನಲ್ಲಿ ಅಫ್ಘಾನಿಸ್ತಾನವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಬಳಿಕ ಮಹಿಳೆಯರ ಹಕ್ಕುಗಳನ್ನು ಒಂದೊಂದಾಗಿಯೇ ಹಿಂತೆಗೆದುಕೊಂಡಿತು. ಪ್ರೈಮರಿ ಹಾಗೂ ಪ್ರೌಢಶಾಲೆಗೆ ಹೆಣ್ಣುಮಕ್ಕಳು ಹೋಗುವುದನ್ನು ನಿರ್ಬಂಧಿಸಲಾಯಿತು. ಹಲವು ಉದ್ಯೋಗಗಳಿಂದಲೂ ಮಹಿಳೆಯರನ್ನು ಹೊರಗಿಡಲಾಯಿತು. ಉದ್ಯಾನವನ, ಜಿಮ್‌ಗಳಲ್ಲೂ ಮಹಿಳೆಯರನ್ನು ನಿಷೇಧಿಸಲಾಯಿತು. ಮಾತ್ರವಲ್ಲದೇ ಮಹಿಳೆಯರು ಸಾರ್ವಜನಿಕ ಪ್ರದೇಶಗಳಲ್ಲಿ ಅಡಿಯಿಂದ ಮುಡಿಯವರೆಗೆ ಸಂಪೂರ್ಣವಾಗಿ ಬಟ್ಟೆ ಧರಿಸುವಂತೆ ಆದೇಶಿಸಿದೆ. ಇದನ್ನೂ ಓದಿ: ಕಲಾಪದ ವೇಳೆ ಫೇಸ್‌ಬುಕ್ ಲೈವ್ ಮಾಡಿದ ಶಾಸಕ ವಿಧಾನ ಸಭೆಯಿಂದ ಅಮಾನತು