ಲಕ್ನೋ: ಲಖೀಂಪುರ ಖೇರಿ ಜಿಲ್ಲೆಯ ಬೆಹ್ಜಾಮ್‍ನಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ಶಿಕ್ಷಕರಿಬ್ಬರು ಶಾಲೆಯ ಮೇಲ್ಛವಣಿಯಲಿದ್ದ 24 ಮಂದಿ ವಿದ್ಯಾರ್ಥಿನಿಯರನ್ನು ಬೀಗ ಹಾಕಿ ಕೂಡಿ ಹಾಕಿ ತಮ್ಮ ವರ್ಗಾವಣೆ ಆದೇಶವನ್ನು ರದ್ದುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ.
ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಹಲವಾರು ಗಂಟೆಗಳ ಬಳಿಕ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ವಿದ್ಯಾರ್ಥಿನಿಯರನ್ನು ರಕ್ಷಿಸಿ ಹಾಸ್ಟೆಲ್‍ಗೆ ಕಳುಹಿಸಿದ್ದಾರೆ. ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯವು ನೀಡಿದ್ದ ವರ್ಗಾವಣೆ ಆದೇಶವನ್ನು ರದ್ದುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಶಿಕ್ಷಕರು ಇಂತಹ ಕೆಲಸವನ್ನು ಮಾಡಿದ್ದಾರೆ ಎಂದು ಲಖೀಂಪುರ ಖೇರಿಯ ಮೂಲ ಶಿಕ್ಷಣಾಧಿಕಾರಿ ಲಕ್ಷ್ಮೀಕಾಂತ್ ಪಾಂಡೆ ತಿಳಿಸಿದ್ದಾರೆ. ಇದನ್ನೂ ಓದಿ: 15% ಜನರಿಗಾಗಿ 85% ನಾಗರಿಕರ ಮೂಲಭೂತ ಹಕ್ಕು ಉಲ್ಲಂಘನೆ – ಹಲಾಲ್ ಉತ್ಪನ್ನ ನಿಷೇಧಿಸುವಂತೆ ಸುಪ್ರೀಂನಲ್ಲಿ ಅರ್ಜಿ
ಘಟನೆಯ ಬಗ್ಗೆ ಹಾಸ್ಟೆಲ್ ವಾರ್ಡನ್ ಲಲಿತ್ ಕುಮಾರಿ ಮತ್ತು ಲಕ್ಷ್ಮೀಕಾಂತ್ ಪಾಂಡೆ, ಬಾಲಕಿಯರ ಶಿಕ್ಷಣದ ಜಿಲ್ಲಾ ಸಂಯೋಜಕಿ ರೇಣು ಶ್ರೀವಾಸ್ತವ್ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅವರು, ಹಲವಾರು ಗಂಟೆಗಳ ಸಮಯ ಅಲ್ಲಿಯೇ ಕಾಲ ಕಳೆದರು. ನಂತರ ಸ್ಥಳೀಯ ಪೊಲೀಸರು ಮಹಿಳಾ ಸಿಬ್ಬಂದಿಯನ್ನು ಕರೆಸಿ ಸಮಸ್ಯೆಯನ್ನು ಪರಿಹರಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿಯೇ ಮಾಡಬಹುದು ಸರಳವಾದ ಸಬ್ಬಕ್ಕಿ ಪಾಯಸ
ಇದೀಗ ಮನೋರಮಾ ಮಿಶ್ರಾ ಮತ್ತು ಗೋಲ್ಡಿ ಕಟಿಯಾರ್ ಇಬ್ಬರು ಶಿಕ್ಷಕರ ವಿರುದ್ಧ ಪೊಲೀಸರು ಐಪಿಸಿಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಶಿಕ್ಷಕರು ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.