ಚಂಡೀಗಢ: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ (Chandigarh University) ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ (Private Video) ಲೀಕ್ ಪ್ರಕರಣ ಬೆಳಕಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ಹಾಸ್ಟೆಲ್‌ನಲ್ಲಿ (Hostel Toilet) ವಾಶ್ ರೂಂ ಬಳಸೋದಕ್ಕೂ ಹೆದರುತ್ತಿದ್ದಾರೆ.
ಹಾಸ್ಟೆಲ್ ವಿದ್ಯಾರ್ಥಿನಿಯರ (Hostel Students) ಸ್ನಾನದ ವೀಡಿಯೋ ಲೀಕ್ ಪ್ರಕರಣವು ವ್ಯಾಪಕ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಚಂಗೀಗಢ ವಿಶ್ವವಿದ್ಯಾಲಯವನ್ನು 5 ದಿನ ಬಂದ್ ಮಾಡಲಾಗಿದೆ. ಸೆ.24ರವರೆಗೆ ವಿವಿಯನ್ನು ಬಂದ್ ಮಾಡಲಾಗಿದೆ. ಆದರೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದ್ಯಾರ್ಥಿನಿಯರು ಭಯಭೀತರಾಗಿದ್ದು, ಹಾಸ್ಟೆಲ್ ತೊರೆದು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇನ್ನು ಇರುವ ವಿದ್ಯಾರ್ಥಿನಿಯರಂತು ಸ್ನಾನದ ಕೊಠಡಿಗಳನ್ನು ಬಳಸೋದಕ್ಕೆ ಹೆದರುತ್ತಿದ್ದಾರೆ.
ನಿನ್ನೆ ರಾತ್ರಿಯಷ್ಟೇ ವೀಡಿಯೋ ಲೀಕ್ ಮಾಡಿದ ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆದು, ಆಕೆಯಿಂದ ವೀಡಿಯೋ ಕಳಿಸಿಕೊಂಡಿದ್ದ ಬಾಯ್‌ಫ್ರೆಂಡ್‌ನನ್ನು ಬಂಧಿಸಲಾಗಿದೆ. ಆದರೂ ವಿದ್ಯಾರ್ಥಿಗಳ ಆಕ್ರೋಶ ಕಡಿಮೆಯಾಗಿಲ್ಲ. ವೀಡಿಯೋ ಲೀಕ್ ಆದಾಗಿನಿಂದಲೂ ವಿದ್ಯಾರ್ಥಿನಿಯರು ವಾಶ್‌ರೂಂ ಗಳಲ್ಲಿ ಸ್ನಾನ ಮಾಡಲು ಹೆದರುತ್ತಿದ್ದಾರೆ. ಹಾಗಾಗಿ ಪೊಲೀಸರು (Police) ಹಾಸ್ಟೆಲ್‌ನಲ್ಲಿ ಹಿಡನ್ ಕ್ಯಾಮೆರಾಗಳಿವೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಸ್ನಾನದ ವೀಡಿಯೋ ಲೀಕ್ ಬೆನ್ನಲ್ಲೇ ಹಾಸ್ಟೆಲ್ ತೊರೆಯುತ್ತಿರುವ ವಿದ್ಯಾರ್ಥಿನಿಯರು – 5 ದಿನ ವಿವಿ ಬಂದ್
ಇದೇ ವೇಳೆ ವಿದ್ಯಾರ್ಥಿನಿಯೋರ್ವಳು ಮಾತನಾಡಿ, ನಾನು ಡೇ ಸ್ಕಾಲರ್, ಖಂಡಿತವಾಗಿಯೂ ಇಲ್ಲಿನ ವಿದ್ಯಾರ್ಥಿಗಳಿಗೆ ಭಯವಿದೆ. ವಿವಿ ಆಡಳಿತ ಮಂಡಳಿ ಪೊಲೀಸರಿಗೆ ಲಂಚ ನೀಡಿದೆ. ಆದ್ದರಿಂದ ಪೊಲೀಸರು ವಿದ್ಯಾರ್ಥಿನಿಯರಿಗೆ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಕೇಸ್ – ಹುಡುಗಿಯ ಬಾಯ್‌ಫ್ರೆಂಡ್ ಸಹ ಅರೆಸ್ಟ್
ಪ್ರಕರಣ ಕುರಿತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagawant mann) ತನಿಖೆಗೆ ಆದೇಶಿಸಿದ್ದಾರೆ. ಪಂಜಾಬ್ ಪೊಲೀಸರು (Panjab Police) ಸಹ ಉನ್ನತಮಟ್ಟದಲ್ಲಿ ತನಿಖೆ ನಡೆಸಲು ವಿಶೇಷ ತಂಡ ನಿಯೋಜಿಸುವುದಾಗಿ ಭರವಸೆ ನೀಡಿದ್ದಾರೆ.