ಹಾಸನ: ಜಿಲ್ಲೆಯಲ್ಲಿ (Hassan) ಶಂಕಿತ ಡೆಂಗ್ಯೂಗೆ (Dengue) ಮತ್ತೋರ್ವ ಬಾಲಕಿ ಮೃತಪಟ್ಟಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಮೃತ ಬಾಲಕಿಯನ್ನು ಹೊಳೆನರಸೀಪುರ (Holenarasipur) ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ಸಮೃದ್ಧಿ (8) ಎಂದು ಗುರುತಿಸಲಾಗಿದೆ. ಬಾಲಕಿ ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿಯಾಗಿದ್ದು, ಕಳೆದ 4 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೈಸೂರಿನ ಅಪೋಲೊ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಇದೀಗ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ
ಕಳೆದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ನಾಲ್ವರು ಬಾಲಕಿಯರು ಬಲಿಯಾಗಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನಲ್ಲೇ ಮೂವರು ಬಾಲಕಿಯರು ಬಲಿಯಾಗಿದ್ದಾರೆ. ಒಟ್ಟಾರೆ ಡೆಂಗ್ಯೂ ಮಹಾಮಾರಿಯಿಂದ ಹಾಸನ ಜಿಲ್ಲೆಯ ಜನತೆ ನಲಗುತ್ತಿದ್ದು, ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜನ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಎಲ್ಲೆಲ್ಲಿ ಏನಾಗಿದೆ?