ತುಮಕೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ನಂದಿನಿ ಧಾರಾವಾಹಿಯ ಪಾತ್ರ ಅನುಕರಣೆ ಮಾಡಿ ಬಾಲಕಿಯೊರ್ವಳು ಬಲಿಯಾದ ಘಟನೆ ಮಾಸುವ ಮುನ್ನವೇ `ಯಾರೇ ನೀ ಮೋಹಿನಿ’ ಯ ಕಥೆ ಕೇಳಿ ವಿದ್ಯಾರ್ಥಿನಿಯೊಬ್ಬಳು ಅಸ್ವಸ್ಥಳಾಗಿದ್ದಾಳೆ.
ಹೌದು. ತುಮಕೂರು ನಗರದ ಬೈಲಾಂಜನೇಯಸ್ವಾಮಿ ದೇವಸ್ಥಾನದ ಬಳಿ ಇರುವ ಇಂಡೋಕಿಟ್ಸ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಧಾರಾವಾಹಿಯಲ್ಲಿನ ಭೂತದ ಕಥೆ ಕೇಳಿ ಇಬ್ಬರು ಮಕ್ಕಳು ಹೆದರಿ ಅದರಲ್ಲಿ ಓರ್ವ ಬಾಲಕಿ ಚಳಿ ಜ್ವರದಿಂದ ಅಸ್ವಸ್ಥಳಾಗಿದ್ದಾಳೆ. ಇದನ್ನೂ ಓದಿ: ಶಾಕಿಂಗ್.. ಸೀರಿಯಲ್ ಸೀನ್ ನೋಡಿ ಬೆಂಕಿ ಹಚ್ಚಿಕೊಂಡು ಬಾಲಕಿ ಸಾವು!
Advertisement
ಯಾರೇ ನೀ ಮೋಹಿನಿ ಧಾರವಾಹಿ ವೀಕ್ಷಿಸಿದ ಬಾಲಕಿ ಪುಷ್ಮಿತಾ ಶಾಲೆಗೆ ಬಂದು ತನ್ನ ಸಹಪಾಠಿ ಪ್ರತಿಕ್ಷಾಗೆ ಹೇಳಿದ್ದಾಳೆ. ಧಾರಾವಾಹಿಯಲ್ಲಿ ಇರುವಂತೆ ಶಾಲೆಯಲ್ಲೂ ಕೂಡ ಭೂತ-ಪಿಶಾಚಿ ಇದೆ ಎಂದು ಪುಷ್ಮಿತಾ ತಾನು ಹೆದರಿದ್ದಲ್ಲದೇ ಪ್ರತಿಕ್ಷಾಗೂ ಹೆದರಿಸಿದ್ದಾಳೆ.
Advertisement
ಈ ಭಯದಲ್ಲೇ ಮನೆಗೆ ಹೋಗಿದ್ದ ಪ್ರತಿಕ್ಷಾಗೆ ಚಳಿ-ಜ್ವರ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಪೋಷಕರು ಚಿಕಿತ್ಸೆ ನೀಡಿ ವಿಚಾರಿಸಿದಾಗ ಪ್ರತಿಕ್ಷಾ ಧಾರಾವಾಹಿಯಲ್ಲಿನ ಭೂತದ ಕಥೆ ಹೇಳಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸೀರಿಯಲ್ ಗೆ ಬಾಲಕಿ ಬಲಿ ಪ್ರಕರಣ- ಟಿವಿ ಒಡೆದು ನೊಂದ ಪೋಷಕರ ಆಕ್ರೋಶ