ಕ್ಯಾಂಡಲ್‌ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕುತ್ತಿದ್ದ ಬಾಲಕಿ ಬೆಂಕಿಗೆ ಬಲಿ

Public TV
1 Min Read
girl who was putting petrol on a bike died due to fire kunigal

ತುಮಕೂರು:  ಮೊಂಬತ್ತಿ ಬೆಳಕಿನಲ್ಲಿ ಬೈಕ್‌ಗೆ ಪೆಟ್ರೋಲ್ ಹಾಕುವಾಗ ಪೆಟ್ರೊಲ್‌ ಬಾಟಲ್‌ ಕೈತಪ್ಪಿ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೌಂದರ್ಯ (16) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಕುಣಿಗಲ್ ತಾಲೂಕು ಎಡೆಯೂರು ಹೋಬಳಿಯ ಕಟ್ಟಿಗೇಹಳ್ಳಿ ಗ್ರಾಮದ  ಲಕ್ಷ್ಮಣರವರ ಮಗಳು ಸೌಂದರ್ಯ ಪಟ್ಟಣದ ಮಹಾತ್ಮ ಗಾಂಧಿ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ಓದುತ್ತಿದ್ದಳು.  ಇದನ್ನೂ ಓದಿ: ಮೇ ಕಳೆದ ಬಳಿಕ ಸರ್ಕಾರ ಪತನ ಖಚಿತ: ಹೆಚ್‍ಡಿಕೆ ಸ್ಫೋಟಕ ಭವಿಷ್ಯ

 

ಶುಕ್ರವಾರ ರಾತ್ರಿ ಮನೆಯ ಅಂಗಡಿಯಲ್ಲಿ ವಿದ್ಯುತ್ ಇಲ್ಲದಾಗ ಮೊಂಬತ್ತಿ ಹಚ್ಚಿ ಇಡಲಾಗಿತ್ತು. ಎದುರಿನಲ್ಲಿಯೇ ಬೈಕ್‌ಗೆ ಪೆಟ್ರೋಲ್ ಹಾಕುವಾಗ ವಿದ್ಯುತ್ ಬಂದಾಗ ಗಾಬರಿಗೊಂಡ ಸೌಂದರ್ಯ ಪೆಟ್ರೋಲ್ ಬಾಟಲಿ ಕೈ ಬಿಟ್ಟಿದ್ದಾಳೆ. ಈ ವೇಳೆ ಪೆಟ್ರೋಲ್ ಚೆಲ್ಲಿ ಮೇಣದಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಅಂಗಡಿ ಸಾಮಾಗ್ರಿ ಆಹುತಿಯಾಗಿತ್ತು.

ಗಾಯಗೊಂಡಿದ್ದ ಸೌಂದರ್ಯಳನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸೌಂದರ್ಯ ಮೃತಪಟ್ಟಿದ್ದು, ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 

Share This Article