ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿಯಲ್ಲಿ ಹೆಣ್ಣು ಮಕ್ಕಳು ಸಂಚರಿಸೋಕೆ ಆಗಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಆರೋಪಕ್ಕೆ ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾಣಿ ಧ್ವನಿ ಎತ್ತಿದ್ದಾರೆ.
ರಾಜಧಾನಿ ಬೆಂಗಳೂರಿನ ಬಗ್ಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹೆಣ್ಣು ಮಕ್ಕಳ ವಿರುದ್ಧ ಹಲವರು ಅಪವಾದ ಎತ್ತಿದ್ದಾಗ ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾಣಿ, ಸಿಲಿಕಾನ್ ಸಿಟಿ ಪರವಾಗಿ ಧ್ವನಿ ಎತ್ತಿದ್ದಾರೆ.
ಎಷ್ಟು ಹೊತ್ತಲ್ಲೂ ಬೇಕಾದರೂ, ಯಾವ ಬಟ್ಟೆಯಲ್ಲಿ ಬೇಕಾದ್ರೂ ಸಿಲಿಕಾನ್ ಸಿಟಿಯಲ್ಲಿ ಸುತ್ತಾಡಬಹುದು. ನಾನೇ ಎಷ್ಟೋ ಸಲ ಮಧ್ಯರಾತ್ರಿ ಮನೆಯಿಂದ ಹೊರಗೆ ಹೋಗಿ ಸೇಫ್ ಆಗಿ ವಾಪಸ್ ಬಂದಿದ್ದೇನೆ. ದೆಹಲಿ ಹಾಗೂ ಕೋಲ್ಕತ್ತಾದಂತಹ ನಗರಗಳಿಗೆ ನಮ್ಮ ಬೆಂಗಳೂರನ್ನು ಹೋಲಿಸಿ ಮಾತನಾಡುವುದು ಸರಿಯಲ್ಲ ಸಂಜನಾ ಗುಡುಗಿದ್ದಾರೆ.