ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಪಿತ್ರೋಡಿ ಹೊಳೆಯಲ್ಲಿ ಏಕಾಏಕಿ ಮೀನುಗಳು ಸತ್ತ ಹಿನ್ನೆಲೆ ಸ್ಥಳ ಪರಿಶೀಲನೆಗೆ ಬಂದ ಅಧಿಕಾರಿಗಳಿಗೆ ಗ್ರಾಮಸ್ಥರು ಆಣೆ-ಪ್ರಮಾಣ ಮಾಡಿಸಿದ್ದಾರೆ. ನಿಷ್ಪಕ್ಷಪಾತವಾದ ವರದಿಯನ್ನು ಕೊಡಬೇಕು ಇಲ್ಲದಿದ್ದರೆ ನಿಮ್ಮನ್ನು ದೈವ ದೇವರು ನೋಡಿಕೊಳ್ಳುತ್ತಾರೆ ಎಂದು ತಾಕೀತು ಮಾಡಿದ್ದಾರೆ.
Advertisement
ಅಧಿಕಾರಿಗಳಿಗೆ ಗ್ರಾಮಸ್ಥರು ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸೋದು ಸಾಮಾನ್ಯ. ಆದರೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಳೆಯಲ್ಲಿ ಮೀನುಗಳು ಏಕಾಏಕಿ ಸತ್ತ ಹಿನ್ನೆಲೆ ಮೀನುಗಳ ಪರಿಶೀಲನೆಗೆ ಬಂದಿದ್ದ ಮೀನುಗಾರಿಕಾ ಇಲಾಖೆ ಅಧಿಕಾರಿಗಳಿಗೆ ಆಣೆ-ಪ್ರಮಾಣ ಮಾಡಿಸುವ ಮೂಲಕ ಗ್ರಾಮಸ್ಥರು ಪೇಚಿಗೆ ಸಿಲುಕಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಹಟ್ಟಿಗೆ ನುಗ್ಗಿ ಗೋವು ಕಳ್ಳತನ- ಪೊಲೀಸ್ ಠಾಣೆ ಮುಂದೆ ಪ್ರತಿಭಟನಾ ಭಜನೆ
Advertisement
Advertisement
ಅಧಿಕಾರಿಗಳ ಪ್ರಾಮಾಣಿಕತೆ ಬಗ್ಗೆ ನಮಗೆ ಸಂಶಯವಿದೆ ಎಂದ ಗ್ರಾಮಸ್ಥರು, ನೀವು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ವರದಿ ಸಲ್ಲಿಸಿ ಎಂದು ತೆಂಗಿನ ಕಾಯಿ ಮುಟ್ಟಿ ದೇವರ ಹೆಸರಿನಲ್ಲಿ ಆಣೆ ಪ್ರಮಾಣ ಮಾಡಿಸಿದ್ದಾರೆ. ಅಧಿಕಾರಿಗಳು ತೆಂಗಿನಕಾಯಿಯನ್ನು ಮುಟ್ಟಿ ಯಾವುದೇ ಪೂರ್ವಾಗ್ರಹ ಇಲ್ಲದೆ ವರದಿ ಸರ್ಕಾರಕ್ಕೆ ಸಲ್ಲಿಕೆ ಮಾಡುತ್ತೇವೆ ಎಂದು ಪ್ರಮಾಣ ಮಾಡಿದ್ದಾರೆ. ಇದೀಗ ಅಧಿಕಾರಿಗಳು ಯಾವ ರೀತಿಯ ವರದಿಯನ್ನು ಸರ್ಕಾರಕ್ಕೆ ಕೊಡುತ್ತಾರೆ ಎಂಬ ಕುತೂಹಲ ಗ್ರಾಮಸ್ಥರಲ್ಲಿ ಮನೆಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಸ್ಫೋಟ – ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ
Advertisement