ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ (Bhadra Upper Bank Project) ಕೇಂದ್ರದಿಂದ ಬರುವ ಅನುದಾನ (Grant) ಪಡೆಯಲು ರಾಜ್ಯ ಸರ್ಕಾರ ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸದೇ, ರಾಜಕೀಯಕ್ಕಾಗಿ ಕೇಂದ್ರದ ವಿರುದ್ಧ ಆರೋಪ ಮಾಡಿ ರಾಜ್ಯದ ಜನತೆಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ರಾಜ್ಯ ಸರ್ಕಾರಕ್ಕೆ ಠಕ್ಕರ್ ನೀಡಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಉತ್ತರ ನೀಡುತ್ತಿರುವಾಗ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದ ಅವರು, ಬಜೆಟ್ (Budget) ಬಗ್ಗೆ ಪತ್ರಿಕೆಗಳ ಸಂಪಾದಕೀಯಗಳಲ್ಲಿ ಬಂದಿರುವ ಹೊಗಳಿಕೆಗಳನ್ನು ಪ್ರಸ್ತಾಪ ಮಾಡಿ ಸಮರ್ಥನೆ ಮಾಡಿಕೊಂಡಿರುವುದಕ್ಕೆ ವ್ಯಂಗ್ಯವಾಡಿದರು. ನೀವು ಮುಖ್ಯಮಂತ್ರಿ ಆಗಿದ್ದೀರ, ಹಿಂದೆ ವಿಪಕ್ಷ ನಾಯಕರೂ ಆಗಿದ್ದೀರ. ಆದರೆ, ನಿಮ್ಮ ಸಾಮರ್ಥ್ಯ ಬಗ್ಗೆ ಪತ್ರಿಕೆಗಳ ಸಂಪಾದಕೀಯಗಳ ಸಹಾಯ ತೆಗೆದುಕೊಂಡು ಮಾತಾಡುವಷ್ಟರ ಮಟ್ಟಿಗೆ ಅಸಹಾಯಕರಾಗಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪರಿಷತ್ ಉಪಚುನಾವಣೆಯಲ್ಲಿ ‘ಕೈ’ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು; ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ
Advertisement
Advertisement
15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ, ಪೆರಿಫೆರಲ್ ರಸ್ತೆಗಳ 6,300 ಕೋಟಿ ರೂ. ಹಣ ಕೊಟ್ಟಿಲ್ಲ. ನಮ್ಮ ರಾಜ್ಯದಿಂದ ಗೆದ್ದು ಹೋದ ನಿರ್ಮಲಾ ಸೀತಾರಾಮನ್ (Nirmala Sitharaman) ಈ ಅನುದಾನಗಳನ್ನು ನಿರಾಕರಿಸಿದರು ಎಂದು ಸಿಎಂ ಸತ್ಯ ಮರೆಮಾಚಿ ಕಾನೂನು ತಿರುಚಿ ಹೇಳುತ್ತಿದಾರೆ ಎಂದು ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದರು. 15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5,495 ಕೋಟಿ ಶಿಫಾರಸು ಮಾಡಿದ್ದು ನಿಜ. ಆದರೆ ಅಂತಿಮ ವರದಿಯಲ್ಲಿ ಅದು ಇರಲಿಲ್ಲ. ಇರದ ಮೇಲೆ ಕೇಳುವುದು ಹೇಗೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಅವಿರೋಧ ಆಯ್ಕೆ
Advertisement
Advertisement
ಇನ್ನು ಪೆರಿಫರಲ್ ರಸ್ತೆಗೆ 6,000 ಕೋಟಿ ಈಗಲೂ ಇದೆ. ಆದರೆ ಇಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯೇ ಶುರು ಮಾಡಿಲ್ಲ. ಭೂಸ್ವಾಧೀನವೇ ಆಗಿಲ್ಲ. ಯೋಜನೆ ಆರಂಭ ಮಾಡಿದರೆ ಕೇಂದ್ರದ ಅನುದಾನ ಬರುತ್ತದೆ. ಕೇಂದ್ರದಿಂದ ಅನುದಾನ ಕೇಳಬೇಕು ಅಂದರೆ ನಿರ್ದಿಷ್ಟ ರೀತಿಯಲ್ಲಿ ಪ್ರಸ್ತಾವನೆ ಕಳುಹಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆಯೂ ಸಿಗುತ್ತದೆ ಎಂದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರ? – ಕಾಂಗ್ರೆಸ್ ನಿಯೋಗದಿಂದ ಕಮಿಷನರ್‌ಗೆ ದೂರು
ಈ ವಿಚಾರದಲ್ಲಿ ನಮ್ಮ ಸರ್ಕಾರ ಯೋಜನೆಗೆ ಅಗತ್ಯ ಅನುಮತಿಗಳನ್ನು ಕೊಟ್ಟಿತ್ತು. ಈಗಲೂ ಕೇಂದ್ರದಿಂದ ಹಣ ಬರುತ್ತದೆ. ಅದಕ್ಕೆ ಹೋಗಿ ಕೇಳಬೇಕು. ಸರಿಯಾದ ಪ್ರಯತ್ನ ಮಾಡದೇ ಅನುದಾನ ಬಂದಿಲ್ಲ ಎನ್ನುವುದು ಸರಿಯಲ್ಲ. ಭದ್ರಾ ಮೇಲ್ದಂಡೆ ಯೋಜನೆ ಹೊಸ ಯೋಜನೆ ಆಗಿರುವುದರಿಂದ ಎನ್ ಫಾರ್ಮ್‌ನಡಿ ಪ್ರಸ್ತಾವನೆ ಸಲ್ಲಿಸಬೇಕು. ಅನುದಾನ ಕೇಳುವುದು ಹೇಗೆ ಎಂದು ಕಾಂಗ್ರೆಸ್‌ಗೆ ಗೊತ್ತಿಲ್ಲ ಆರೋಪಿಸಿದರು. ಇದನ್ನೂ ಓದಿ: ವಕೀಲರು Vs ಪೊಲೀಸರು – ಫೇಸ್‌ಬುಕ್ ಪೋಸ್ಟ್‌ನಿಂದ ಅಹೋರಾತ್ರಿ ಧರಣಿಯವರೆಗೆ: ರಾಮನಗರದಲ್ಲಿ ಪ್ರತಿಭಟನೆ ಯಾಕೆ?
ಈ ಸಂದರ್ಭದಲ್ಲಿ ಯಾವ ಮಾದರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತರಬೇತಿ ಕೊಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಸಿದರೆ ರಾಜ್ಯದ ಹಿತದೃಷ್ಟಿಯಿಂದ ನಾವು ನಿಮ್ಮ ಜೊತೆಗೆ ಬರುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ. ಬಿಡುಗಡೆ