-ಚುನಾವಣಾ ರಾಜಕೀಯದಿಂದ ವಿಮುಖವಾಗುವ ಸುಳಿವು?
ನವದೆಹಲಿ: ತುಮಕೂರಿನಿಂದ (Tumakuru) ಲೋಕಸಭೆ ಚುನಾವಣೆಗೆ (Lok Sabha Election) ಸ್ಪರ್ಧಿಸುವ ಲೆಕ್ಕಾಚಾರದಲ್ಲಿದ್ದ ಮಾಜಿ ಸಚಿವ, ಬಿಜೆಪಿ ನಾಯಕ ವಿ.ಸೋಮಣ್ಣ (V Somanna)ಈಗ ವರಸೆ ಬದಲಿಸಿದ್ದು, ರಾಜ್ಯಸಭೆಗೆ ಆಯ್ಕೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
Advertisement
ದೆಹಲಿಯಲ್ಲಿ (New Delhi) ಹೈಕಮಾಂಡ್ ಭೇಟಿ ಬಳಿಕ ಮಾತನಾಡಿರುವ ಅವರು, ರಾಜ್ಯಸಭೆಗೆ ಆಯ್ಕೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ (Amit Shah) ಮನವಿ ಮಾಡಿದೆ ಎಂದು ಹೇಳಿದರು. ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ತೆರಳಿದ್ದ ವಿ.ಸೋಮಣ್ಣ ಕಳೆದ ನಾಲ್ಕು ದಿನಗಳಿಂದ ಠಿಕಾಣಿ ಹೂಡಿದ್ದರು. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಭೇಟಿ ಮಾಡಿದ ಅವರು, ಅಮಿತ್ ಶಾ ಜೊತೆ ಅರ್ಧ ಗಂಟೆ ಮಾತುಕತೆ ನಡೆಸಿ ರಾಜ್ಯದ ಬೆಳವಣಿಗೆಗಳ ಬಗ್ಗೆ ತಮ್ಮ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಜೊತೆಗೆ ಮಂಪರು ಪರೀಕ್ಷೆಗೆ ಒಳಪಡಿಸುವುದಾದ್ರೆ ನಾನು ಸಿದ್ಧ: ಬಿ.ಕೆ ಹರಿಪ್ರಸಾದ್
Advertisement
Advertisement
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಉದ್ದೇಶಪೂರ್ವಕವಾಗಿ ಸೋಲಿಸಲಾಗಿದೆ. ಹಿರಿತನಕ್ಕೆ ಆದ್ಯತೆ ನೀಡದೆ ಗೌರವಪೂರ್ವಕವಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಪರೋಕ್ಷವಾಗಿ ಬಿ.ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಅತೃಪ್ತಿ ಹೊರ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೇ ಚುನಾವಣೆ ರಾಜಕಾರಣದಿಂದ ವಿಮುಖವಾಗುವ ನಿಟ್ಟಿನಲ್ಲಿ ರಾಜ್ಯಸಭೆಗೆ ಅವಕಾಶ ನೀಡಬೇಕು. ಅಲ್ಲದೇ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: 4 ಮಕ್ಕಳ ತಂದೆ, 5 ಮಕ್ಕಳಿದ್ದ ಅತ್ತಿಗೆಯೊಂದಿಗೆ ಜೂಟ್ – ಆರೋಪಿ ಪತ್ನಿ 5ನೇ ಬಾರಿಗೆ ಗರ್ಭಿಣಿ
Advertisement
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಅಮಿತ್ ಶಾ ಮತ್ತು ನಡ್ಡಾ ಅವರನ್ನು ಭೇಟಿ ಮಾಡಿದೆ. ತುಂಬಾ ಚೆನ್ನಾಗಿ ಮಾತುಕತೆ ನಡೆಯಿತು. ಮುಖ್ಯವಾಹಿನಿಯಲ್ಲಿ ಇರಬೇಕು ಎಂದಿದ್ದಾರೆ. ರಾಜ್ಯಸಭೆಗೆ ಅವಕಾಶ ಮಾಡಿಕೊಡಿ ಎಂದು ಹೇಳಿದ್ದೇನೆ. ಅವಕಾಶ ನೀಡಿದಲ್ಲಿ ಯಾವುದಾದರೂ 3 ಕ್ಷೇತ್ರಗಳ ಕೆಲಸ ಕೊಡಿ, ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಅಪಹರಣಕಾರರೆಂದು ಸಾಧುಗಳಿಗೆ ಹಿಗ್ಗಾಮುಗ್ಗ ಥಳಿತ – ಪಶ್ಚಿಮ ಬಂಗಾಳದ 12 ಮಂದಿ ಅರೆಸ್ಟ್
ಕೆಲವೊಂದು ಪ್ರಮುಖ ವಿಚಾರಗಳನ್ನು ನಾನು ಚರ್ಚೆ ಮಾಡಿದ್ದೇನೆ. ಎಲ್ಲಾ ಮಾತುಕತೆಯ ಬಗ್ಗೆ ನಾನು ಬಹಿರಂಗವಾಗಿ ಹೇಳಲು ಆಗಲ್ಲ. ಅಮಿತ್ ಶಾ ಭೇಟಿ ಬಹಳ ಸಮಧಾನ ತಂದಿದೆ. ನಿಮ್ಮ ಸೇವೆಯನ್ನು ಬಳಸಿಕೊಳ್ಳುವುದಾಗಿ ಹೇಳಿದ್ದಾರೆ. ಈ ಹಿಂದೆ ಆದಂತೆ ಮುಂದೆ ಆಗಲು ಬಿಡುವುದಿಲ್ಲ. ನಾವು ಸೂಚನೆಗಳನ್ನು ಕೊಡುತ್ತೇವೆ ಎಂದಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿಲ್ಲ. ಲೋಕಸಭಾ ಸ್ಪರ್ಧೆಯ ಬಗ್ಗೆ ಹೈಕಮಾಂಡ್ ತೀರ್ಮಾನದಂತೆ ನಡೆಯುವೆ ಎಂದು ಹೇಳಿದರು. ಇದನ್ನೂ ಓದಿ: ಮನೆಯ ಮುಂದೆ ರಾಮಮಂದಿರದ ಪ್ರತಿಕೃತಿ ನಿರ್ಮಿಸಿದ ಎಂಜಿನಿಯರ್