Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿದ ಜಾಗ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ನೀಡಿ: ಡಾ.ನಾರಾಯಣಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿದ ಜಾಗ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ನೀಡಿ: ಡಾ.ನಾರಾಯಣಗೌಡ

Bengaluru City

ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿದ ಜಾಗ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ನೀಡಿ: ಡಾ.ನಾರಾಯಣಗೌಡ

Public TV
Last updated: September 17, 2021 3:43 pm
Public TV
Share
2 Min Read
NARAYAN GOWDA 1
SHARE

-ಸಿಎಂ ಹಾಗೂ ಕಂದಾಯ ಸಚಿವರಿಗೆ ಪತ್ರ

ಬೆಂಗಳೂರು: ರಾಮನಗರ ಜಿಲ್ಲಾಡಳಿತ ಮಾಡಿದ ಕಾರ್ಯ ಶ್ಲಾಘನೀಯ. ಬಿಡದಿಯಲ್ಲಿರುವ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಕೋರ್ಟ್ ಆದೇಶದಂತೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಶಾಲವಾಗಿರುವ ಈ ನಿವೇಶನ ಕ್ರೀಡಾ ಚಟುವಟಿಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಸ್ಥಳವನ್ನು ಕ್ರೀಡಾ ಸಮುಚ್ಚಯ ನಿರ್ಮಾಣಕ್ಕಾಗಿ ನೀಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

BASAVARAJ BOMMAI 2

ನಮ್ಮ ರಾಜ್ಯದ ಕ್ರೀಡಾಪಟುಗಳಿಗೆ ಒಲಂಪಿಕ್ಸ್ ಕ್ರೀಡಾಕೂಟ, ಏಷಿಯಾ ಗೇಮ್ಸ್ ಸೇರಿದಂತೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ತರಬೇತಿ ನೀಡಲು ವಿಶಾಲ ಪ್ರದೇಶದಲ್ಲಿ ಬೃಹತ್ತಾದ ಕ್ರೀಡಾ ಸಮುಚ್ಚಯ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಕ್ರೀಡಾ ಇಲಾಖೆ ಇದಕ್ಕಾಗಿ ವಿಶಾಲ ನಿವೇಶನವನ್ನೂ ಹುಡುಕುತ್ತಿದೆ. ಪ್ರಸ್ತುತ ರಾಮನಗರದ ಬಿಡದಿಯಲ್ಲಿ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಗೋಮಾಳ ಒತ್ತುವರಿ ತೆರವು ಮಾಡಿ ಜಿಲ್ಲಾಡಳಿತ ವಶಕ್ಕೆ ಪಡೆದುಕೊಂಡಿದೆ. ಗಾಲ್ಫ್ ಕೋರ್ಟ್ ಕೂಡ ಈ ಸ್ಥಳದಲ್ಲಿದೆ. ಸಮತಟ್ಟಾಗಿರುವ ಈ ವಿಶಾಲ ಪ್ರದೇಶ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಯೋಗ್ಯವಾಗಿದೆ. ಬೆಂಗಳೂರಿಗೂ ಈ ಪ್ರದೇಶ ಸಮೀಪದಲ್ಲಿದೆ. ಆದ್ದರಿಂದ 77 ಎಕರೆ 18 ಗುಂಟೆ ಈ ಪ್ರದೇಶವನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸಿ ಎಂದು ನಾರಾಯಣಗೌಡ ಅವರು ಬಸವರಾಜ ಬೊಮ್ಮಾಯಿ ಹಾಗೂ ಆರ್.ಅಶೋಕ್ ಅವರಿಗೆ ಪತ್ರದ ಮೂಲಕ ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ಬಾಳೆಎಲೆಯಲ್ಲಿ ಮೂಡಿದ ಮೋದಿ ಚಿತ್ರ

R ASHOK 1 medium

ಪ್ರಸ್ತುತ ಬೆಂಗಳೂರಿನ ಕಂಠೀರವ ಕ್ರೀಡಾಂಗಣವನ್ನು ಆಧುನೀಕರಣ ಮಾಡಲಾಗುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಕ್ರೀಡಾಂಗಣ ಉನ್ನತೀಕರಿಸಲಾಗುತ್ತಿದೆ. ಆದರೆ ಬೆಂಗಳೂರಿಗೆ ಅತ್ಯಂತ ಸಮೀಪವಿರುವ ಇಷ್ಟೊಂದು ವಿಶಾಲ ಪ್ರದೇಶದಲ್ಲಿ ಬೃಹತ್ತಾದ ಕ್ರೀಡಾ ಸಮುಚ್ಚಯ ನಿರ್ಮಿಸಿದರೆ ಕ್ರೀಡಾಪಟುಗಳಿಗೆ ಹೆಚ್ಚು ಅನುಕೂಲವಾಗಲಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣವೂ ಸಮೀಪದಲ್ಲೇ ಇದೆ. ಬೆಂಗಳೂರು ಮೈಸೂರು ನಡುವೆ ವಿಶಾಲ ರಸ್ತೆಯೂ ನಿರ್ಮಾಣವಾಗುತ್ತಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲು ಈ ಸ್ಥಳ ಪ್ರಶಸ್ತವಾಗಲಿದೆ. ಆದ್ದರಿಂದ ರಾಮನಗರದ ಬಿಡದಿಯಲ್ಲಿ ಈಗಲ್‍ಟನ್ ರೆಸಾರ್ಟ್ ನಿಂದ ಒತ್ತುವರಿ ತೆರವು ಮಾಡಿರುವ ಸರ್ಕಾರಿ ಗೋಮಾಳವನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸಿ ಕ್ರೀಡೆಗೆ ಪ್ರೋತ್ಸಾಹಿಸಿ ಎಂದು ನಾರಾಯಣಗೌಡ ಅವರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಬಿಎಸ್‍ವೈ

TAGGED:Basavaraj Bommaieagleton resortnarayana gowdaPublic TVr ashoksportsಆರ್ ಆಶೋಕ್ಈಗಲ್‍ಟನ್ ರೆಸಾರ್ಟ್ಕ್ರೀಡಾ ಇಲಾಖೆಕ್ರೀಡೆನಾರಾಯಣಗೌಡಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

GBA
Bengaluru City

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Public TV
By Public TV
5 seconds ago
Sanju Samson Ishan Kishan
Cricket

ಸಿಕ್ಸರ್‌, ಬೌಂಡರಿಗಳ ಸುರಿಮಳೆ – 255 ರನ್‌ ಹೊಡೆದು ವಿಶ್ವದಾಖಲೆ ಬರೆದ ಟೀಂ ಇಂಡಿಯಾ

Public TV
By Public TV
12 minutes ago
Abhishek Sharma 1
Cricket

ಫೈನಲಿನಲ್ಲಿ ಅಬ್ಬರಿಸಿ ಸ್ಫೋಟಕ ಬ್ಯಾಟಿಂಗ್‌ – ವಿಶ್ವದಾಖಲೆ ಬರೆದ ಅಭಿಷೇಕ್‌ ಶರ್ಮಾ

Public TV
By Public TV
49 minutes ago
HC Mahadevappa Shivanagouda Naik
Chitradurga

ದಲಿತರಿಗೆ ಅನ್ಯಾಯವೆಸಗಿರುವ ಸಚಿವ ಮಹದೇವಪ್ಪ ಸಿಕ್ಕರೆ ಕಪಾಳಮೋಕ್ಷ ಮಾಡುವಾಸೆ: ಶಿವನಗೌಡ

Public TV
By Public TV
1 hour ago
HD Kumaraswamy Womens Day
Bengaluru City

33% ಮಹಿಳಾ ಮೀಸಲು ಸಂಸದೀಯ ಹೆಗ್ಗಳಿಕೆ ಹೆಚ್ಚಿಸಲಿದೆ: ಹೆಚ್‌ಡಿಕೆ

Public TV
By Public TV
2 hours ago
Suryakumar Yadav
Cricket

ನಾವು ಹೇಗಿದ್ದರೂ ಮೊದಲು ಬ್ಯಾಟ್ ಮಾಡುತ್ತಿದ್ದೆವು: ಸೂರ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?